×
Ad

ತಮ್ಮದೇ ಸರ್ಕಾರದ ನಿರ್ಧಾರದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಶಾಸಕ ಸತೀಶ್‌ ರೆಡ್ಡಿ

Update: 2022-09-10 10:16 IST

ಬೆಂಗಳೂರು: ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹುಳಿಮಾವು ವಾರ್ಡ್ ಪುನರ್‌ ವಿಂಗಡಣೆಯನ್ನು ಪ್ರಶ್ನಿಸಿ ಬಿಜೆಪಿಯ ಮುಖ್ಯ ಸಚೇತಕ ಹಾಗೂ ಶಾಸಕ ಎಂ. ಸತೀಶ್ ರೆಡ್ಡಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ವಾರ್ಡ್ ಮರು ವಿಂಗಡಣೆ ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳು ನ್ಯಾಯಮೂರ್ತಿ ಹೇಮಂತ್‌ ಚಂದನ ಗೌಡರ್‌ ಅವರಿದ್ದ ಏಕಸದಸ್ಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದವು.

ಹುಳಿಮಾವು ವಾರ್ಡ್‌ನ ಪುನರ್‌ ವಿಂಗಡಣೆಯನ್ನು ಮರು ಪರಿಶೀಲಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಬಿಜೆಪಿಯ ಮುಖ್ಯ ಸಚೇತಕರೂ ಆಗಿರುವ ಶಾಸಕ ಸತೀಶ್ ರೆಡ್ಡಿ ಮನವಿ ಮಾಡಿದ್ದಾರೆ.

'ವಿಧಾನಸಭಾ ಕ್ಷೇತ್ರಗಳ ಭೌಗೋಳಿಕ ವಿಸ್ತೀರ್ಣ ಹಾಗೂ ಜನಸಂಖ್ಯೆ ಬೆಳವಣಿಗೆಯ ಆಧಾರದಲ್ಲಿ ಹೊಸ ವಾರ್ಡ್‌ಗಳನ್ನು ರಚಿಸಲಾಗಿದೆ' ಎಂದು ಹೈಕೋರ್ಟ್‌ ಪ್ರತಿಪಾದಿಸಿದೆ.

----------------------------------------------------------

''ಪಾಲಿಕೆಯ ಚುನಾವಣೆಯನ್ನು ಮುಂದೂಡಲು ಯಾವುದೇ ಅರ್ಜಿ ಹಾಕಿಲ್ಲ. ನನ್ನ ಮತದಾರರನ್ನು ನನ್ನ ಕ್ಷೇತ್ರದಲ್ಲಿ ಉಳಿಸಿಕೊಡಲು ಬಿಬಿಎಂಪಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶಿಸುವಂತೆ ಕೋರ್ಟ್ ಮೊರೆ ಹೋಗಿದ್ದೇನೆ''. 

ಎಂ. ಸತೀಶ್ ರೆಡ್ಡಿ,  ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಶಾಸಕರು



 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News