×
Ad

'ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿದೆ': ಕಾಂಗ್ರೆಸ್

Update: 2022-09-10 11:30 IST

ಬೆಂಗಳೂರು: 'ಸರ್ಕಾರ ಪರ್ಸೆಂಟೇಜ್ ಮೇಲೆ ನಡೆಯುತ್ತಿದೆಯೇ? ಗುತ್ತಿಗೆದಾರರು, ಜನಸಾಮಾನ್ಯರ ನಂತರ ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿದೆ' ಎಂದು ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ' ಬಸವರಾಜ ಬೊಮ್ಮಾಯಿ  ಅವರೇ, #BJPBrashtotsava ದ ಇಂತಹ ನಾಚಿಕೆಗೇಡಿನ ಸಂಗತಿ ಎದುರಿಟ್ಟುಕೊಂಡು ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದ್ದೀರಿ? ನಾಡಿನ ಎದುರು ತಲೆ ತಗ್ಗಿಸಬೇಕಾದ ಸಮಯವಿದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. 

ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮಾವೇಶವಲ್ಲ "ಕಮಿಷನ್ ಸಮಾವೇಶ" 40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ. ನಿಮ್ಮದೇ ಪಕ್ಷದ ಕಾರ್ಯಕರ್ತ & ಗುತ್ತಿಗೆದಾರ ಸಂತೋಷ್ ಪಾಟೀಲ್‌ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News