ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯ 'ಜನಸ್ಪಂದನ' ಸಮಾವೇಶ ಆರಂಭ

Update: 2022-09-10 07:27 GMT

ದೊಡ್ಡಬಳ್ಳಾಪುರ: ರಾಜ್ಯ ಬಿಜೆಪಿ ಸರಕಾರದ ಮೂರು ವರ್ಷಗಳ ಸಾರ್ಥಕ ಸೇವೆ ಮತ್ತು ಸಬಲಿಕರಣದ ಕಾರ್ಯದ ಹಿನ್ನೆಲೆಯಲ್ಲಿ   ರಾಜ್ಯ ಬಿಜೆಪಿ ಘಟಕ ಆಯೋಜಿಸರುವ  ‘ಜನಸ್ಪಂದನ' ಸಮಾವೇಶವು ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರದ ಎಲ್ ಆಂಡ್ ಟಿ ಮುಂಭಾಗದಲ್ಲಿ ನಡೆಯುತ್ತಿದೆ. 

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್,  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಲವು ನಾಯಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. 

-------------------------------------------------------

ಪಲಾವ್, ಮೊಸರನ್ನ, ಬಾದುಶಾ: ‘ಮೂರು ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದ್ದು, ವೆಜಿಟೇಬಲ್ ಪಲಾವ್, ಮೊಸರನ್ನ, ಬಾದುಶಾ ಸಿಹಿತಿಂಡಿ ನೀಡಲಾಗುತ್ತದೆ. ವಾಹನ ನಿಲುಗಡೆಗೆ 200 ಎಕರೆಗೂ ಹೆಚ್ಚಿನ ವಿಸ್ತೀರ್ಣದಲ್ಲಿ 12ಕಡೆ ಜಾಗಗಳನ್ನು ಗುರುತಿಸಲಾಗಿದೆ. ಸಂಚಾರ ದಟ್ಟಣೆ ಆಗದಂತೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಪೊಲೀಸ್ ಅಧಿಕಾರಿಗಳ ಜೊತೆ ವಿಶೇಷ ಸಭೆ ಮಾಡಲಾಗಿದೆ ಎಂದು ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News