×
Ad

ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ: 'ಜನಸ್ಪಂದನ' ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ ಘೋಷಣೆ

Update: 2022-09-10 15:38 IST
 ಹತ್ಯೆಗೀಡಾದ ಪ್ರವೀಣ್​ ನೆಟ್ಟಾರು 

ದೊಡ್ಡಬಳ್ಳಾಪುರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಗೀಡಾಗಿರುವ ಬಿಜೆಪಿ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರದ ಎಲ್ ಆಂಡ್ ಟಿ ಮುಂಭಾಗದಲ್ಲಿ ನಡೆಯುತ್ತರುವ  ‘ಜನಸ್ಪಂದನ' ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಸಿಎಂ ಬೊಮ್ಮಾಯಿ, ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ  ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಿಸಿದ್ದಾರೆ. 

ಇನ್ನು ರಾಜ್ಯ ಸರಕಾರ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದು,  ಎತ್ತಿನಹೊಳೆ ಯೋಜನೆಯನ್ನ ನಾವು ಆರಂಭಿಸಿದ್ದೇವೆ. ಕಾಂಗ್ರೆಸ್ ಗೆ ಎತ್ತಿನಹೊಳೆ ಯೋಜನೆ ಬಗ್ಗೆ ಏನೂ ಗೊತ್ತಿಲ್ಲ. ಇದೇ ವರ್ಷ ಎತ್ತಿನಹೊಳೆ ನೀರನ್ನು ಹರಿಸುತ್ತೇವೆ. ಕೋಲಾರ-ಚಿಕ್ಕಬಳ್ಳಾಪುರಕ್ಕೆ ಟೌನ್​ಶಿಪ್​ ಬಗ್ಗೆ ಚಿಂತನೆ ನಡೆದಿದೆ ಎಂದರು. 

'ರಾಜ್ಯವನ್ನು ಹೊಗೆಮುಕ್ತ ಹಾಗೂ ಪರಿಸರ ಸ್ನೇಹಿಯನ್ನಾಗಿಸಲು "ಮುಖ್ಯಮಂತ್ರಿ ಅನಿಲ ಭಾಗ್ಯ" ಯೋಜನೆ ಜಾರಿಗೊಳಿಸಲಾಗಿದೆ' ಎಂದು ತಿಳಿಸಿದರು.
 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News