ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದಸರಾ ಉದ್ಘಾಟನೆ: ಸಿಎಂ ಬೊಮ್ಮಾಯಿ

Update: 2022-09-10 13:46 GMT

ಬೆಂಗಳೂರು: 'ಸೆಪ್ಟೆಂಬರ್ 26 ರಂದು ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭ ಆಗಲಿದ್ದು,  ರಾಷ್ಟ್ರದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರು ದಸರಾ ಉದ್ಘಾಟನೆ ಮಾಡಲಿದ್ದಾರೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಯಾರನ್ನು ಆಹ್ವಾನಿಸುವುದು ಎಂಬುದರ ಬಗ್ಗೆ ಸಭೆ ನಡೆಸಿ ಚರ್ಚೆ ಮಾಡಲಾಗಿತ್ತು. ಸಭೆಯ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿರುವುದಾಗಿ ಇಂದು ಪತ್ರ ಬಂದಿದೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ: ದೊಡ್ಡಬಳ್ಳಾಪುರದಲ್ಲಿ ನಡೆದ 'ಜನಸ್ಪಂದನ' ಕಾರ್ಯಕ್ರಮಕ್ಕೆ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತ ಮೃತ್ಯು


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News