ವಂಚನೆ ಆರೋಪ: ಮಂತ್ರಿ ಗ್ರೂಪ್ ನಿರ್ದೇಶಕ ಸುಶೀಲ್ ಮಂತ್ರಿ ಸೇರಿ ಇಬ್ಬರ ಬಂಧನ

Update: 2022-09-10 13:52 GMT
Photo- Twitter/@MrSushilMantri)

ಬೆಂಗಳೂರು, ಸೆ.10: ವಂಚನೆ ಆರೋಪ ಸಂಬಂಧ ರಿಯಲ್ ಎಸ್ಟೇಟ್ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ಮಂತ್ರಿ ಡೆವಲಪರ್ಸ್ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಮಂತ್ರಿ ಮತ್ತು ಅವರ ಪುತ್ರ ಪ್ರತೀಕ್ ಮಂತ್ರಿಯನ್ನು ಸಿಐಡಿ ಬಂಧಿಸಿದೆ.

ಮಂತ್ರಿ ಡೆವಲಪರ್ಸ್ ವಿರುದ್ಧ ಹೂಡಿಕೆದಾರರಿಗೆ ವಂಚಿಸಿದ ಆರೋಪದಡಿ 2019ರ ಜುಲೈನಲ್ಲಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಏಳೆಂಟು ಪ್ರಕರಣ ದಾಖಲಾಗಿದ್ದವು. ಈ ಆರೋಪ ಸಂಬಂಧ ಕಳೆದ ವರ್ಷ ಮಂತ್ರಿ ಗ್ರೂಪ್ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಅನೇಕ ದಾಖಲೆಗಳನ್ನು ಜಪ್ತಿ ಮಾಡಿದ್ದರು.

ಬಳಿಕ ಐಟಿ ಅಧಿಕಾರಿಗಳು, ದಾಖಲೆಗಳ ಸಮೇತ ಈಡಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಈಡಿ ಅಧಿಕಾರಿಗಳು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದರು. ವೈಯಕ್ತಿಕ ಮತ್ತು ಸಂಸ್ಥೆಯ ವ್ಯವಹಾರದಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಪ್ರಿವೆನ್ಷನ್ ಆಫ್ ಮನಿಲಾಂಡರಿಂಗ್ ಆಕ್ಟ್ ಅಡಿ ವಿಚಾರಣೆ ನಡೆಸಿ ಕಳೆದ ಜೂನ್ 25ರಂದು ಸುಶೀಲ್ ಮಂತ್ರಿಯನ್ನು ಬಂಧಿಸಿದ್ದರು. 

ನಂತರದ ದಿನಗಳಲ್ಲಿ ಸುಶೀಲ್ ಮಂತ್ರಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ, ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಿಐಡಿಗೆ ವರ್ಗಾವಣೆಯಾಗಿದ್ದ ಹಿನ್ನೆಲೆಯಲ್ಲಿ ಶುಕ್ರವಾರ ತಡರಾತ್ರಿ ಸಿಐಡಿ ಅಧಿಕಾರಿಗಳು ಸುಶೀಲ್ ಮತ್ತು ಅವರ ಪುತ್ರನನ್ನು ಮತ್ತೆ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News