×
Ad

ಎಸ್.ಆರ್.ಪಾಟೀಲ್ ಮನವೊಲಿಕೆಗೆ ಮುಂದಾದ ಕಾಂಗ್ರೆಸ್ ಮುಖಂಡರು

Update: 2022-09-10 20:26 IST
[ರಣದೀಪ್ ಸಿಂಗ್ ಸುರ್ಜೆವಾಲ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್ ]

ಬೆಂಗಳೂರು, ಸೆ. 10: ‘ಪರಿಷತ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ಸಕ್ರಿಯ ಚಟುವಟಿಕೆಗಳಿಂದ ದೂರವೇ ಉಳಿದಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್.ಪಾಟೀಲ್ ಅವರ ಮನವೊಲಿಕೆಗೆ ಕಾಂಗ್ರೆಸ್ ಮುಖಂಡರು ಮುಂದಾಗಿದ್ದಾರೆ.

ಶನಿವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಸ್.ಆರ್.ಪಾಟೀಲ್ ಅವರನ್ನು ಶುಕ್ರವಾರ ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಖುದ್ದು ಭೇಟಿ ಮಾಡಿ ಸಮಾಲೋಚನೆ ನಡೆಸಿ ಮನವೊಲಿಕೆ ಮಾಡಿದರು.

ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದ ಎಸ್.ಆರ್.ಪಾಟೀಲ್ ಅವರು ಮುಖಂಡರ ವಿರುದ್ಧವೂ ಅಸಮಾಧಾನ ಹೊರಹಾಕಿದ್ದರು. ಅಲ್ಲದೆ, ಪರಿಷತ್ ಚುನಾವಣೆಯಲ್ಲಿ ಆಕಾಂಕ್ಷಿಯಾಗಿದ್ದ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಪಕ್ಷದಿಂದ ದೂರವಾಗಿದ್ದರು. ಅಲ್ಲದೆ, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆಗ್ರಹಿಸಿ ಟ್ರ್ಯಾಕ್ಟರ್ ರ‍್ಯಾಲಿಯನ್ನು ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News