ಬಿಜೆಪಿಯ ಕಾಲ್ಗುಣದಿಂದಾಗಿ ರಾಜ್ಯಾದ್ಯಂತ ಮಳೆಯಾಗಿದೆ: ಸಿ.ಟಿ. ರವಿ

Update: 2022-09-10 18:35 GMT

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ರಾಜ್ಯ ಸಮೃದ್ಧವಾಗಿರುತ್ತದೆ. ಇದಕ್ಕೆ ಉದಾಹರಣೆ ಇಡೀ ರಾಜ್ಯದ ಉದ್ದಗಲಕ್ಕೂ ಮಳೆಯಾಗಿದೆ ಮತ್ತು ಕೆರೆಗಳೆಲ್ಲಾ ತುಂಬಿ ತುಳುಕುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಘುನಾಥಪುರದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರಕಾರದ ಮೂರು ವರ್ಷಗಳ ಸಾಧನೆಯ ‘ಜನಸ್ಪಂದನ’ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

'ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ರಾಜ್ಯ ಸಮೃದ್ಧವಾಗಿರುತ್ತದೆ. ಇದಕ್ಕೆ ಉದಾಹರಣೆ ಇಡೀ ರಾಜ್ಯದ ಉದ್ದಗಲಕ್ಕೂ ಮಳೆಯಾಗಿದೆ ಮತ್ತು ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ' ಎಂದರು. 

ಬಿ.ಎಸ್‌.ಯಡಿಯೂರಪ್ಪ, ಡಿ.ವಿ,ಸಂದಾನಂದಗೌಡ, ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು. ಈಗ ಬಸವಣ್ಣ (ಬಸವರಾಜ ಬೊಮ್ಮಾಯಿ) ಮುಖ್ಯಮಂತ್ರಿಯಾಗಿದ್ದಾರೆ‌. ಈಗಲೂ ರಾಜ್ಯದಾದ್ಯಂತ ಮಳೆಯಾಗಿದೆ. ಇದು ಬಿಜೆಪಿ ಕಾಲ್ಗುಣ. ಕಾಂಗ್ರೆಸ್‌ನವರು ಕಾಲಿಟ್ಟರೆ ಕೆಟ್ಟದಾಗುತ್ತೆ ಎಂದೇ ಅರ್ಥ ಎಂದು ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಅಂದು ತುಕ್ಡೇ ಗ್ಯಾಂಗ್‌ನ ಮುಖಂಡರಿಗೆ ರಕ್ಷಣೆ ನೀಡಿದ ಕಾಂಗ್ರೆಸ್ ಪಕ್ಷ ಇಂದು ಅವರೊಂದಿಗೆ ಭಾರತ್ ಜೋಡೋ ಯಾತ್ರೆ ಮಾಡುತ್ತಿದೆ. ಕಾಂಗ್ರೆಸ್‌ ಪಕ್ಷ ತುಕ್ಡೇ ಗ್ಯಾಂಗಿಗೆ ಬಿರಿಯಾನಿ ನೀಡಿತು, ನಾವು ಸರ್ಜಿಕಲ್ ಸ್ಟ್ರೈಕ್ ಮೂಲಕ ಉತ್ತರ ನೀಡಿದ್ದೇವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News