ಐವರು ಸಂಸದರ ಪತ್ರದ ನಂತರ ಪಕ್ಷದ ಆಂತರಿಕ ಮತದಾನದ ನಿಯಮ ಬದಲಿಸಿದ ಕಾಂಗ್ರೆಸ್
ಹೊಸದಿಲ್ಲಿ: ಮುಂದಿನ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಮಹತ್ವದ ಚುನಾವಣೆಗೆ ಮೊದಲು (crucial election for the next Congress president)ಹಿರಿಯ ನಾಯಕರ ಒತ್ತಾಯದ ಮೇರೆಗೆ ಚುನಾವಣಾ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲು ಪಕ್ಷದ ನಾಯಕತ್ವ ಒಪ್ಪಿಗೆ ನೀಡಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಬಯಸುವ ಯಾರಾದರೂ ಎಲೆಕ್ಟೋರಲ್ ಕಾಲೇಜ್ ರೂಪಿಸುವ ಎಲ್ಲಾ 9,000 ಪ್ರತಿನಿಧಿಗಳ ಪಟ್ಟಿಯನ್ನು ನೋಡಲು ಸಾಧ್ಯವಾಗುತ್ತದೆ. ಈ ಪಟ್ಟಿಯು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಕಚೇರಿಯಲ್ಲಿ ಸೆಪ್ಟೆಂಬರ್ 20 ರಿಂದ ಲಭ್ಯವಿರುತ್ತದೆ ಎಂದು ಕಾಂಗ್ರೆಸ್ ನಾಯಕ ಮಧುಸೂದನ್ ಮಿಸ್ತ್ರಿ (Congress leader Madhusudan Mistry)ಹೇಳಿದ್ದಾರೆ.
ಶಶಿ ತರೂರ್, ಕಾರ್ತಿ ಚಿದಂಬರಂ ಹಾಗೂ ಮನೀಶ್ ತಿವಾರಿ ಸೇರಿದಂತೆ ಐವರು ಸಂಸದರು ಚುನಾವಣಾ ಪ್ರಕ್ರಿಯೆಯಲ್ಲಿ "ಪಾರದರ್ಶಕತೆ, ನ್ಯಾಯಸಮ್ಮತತೆ" ಯನ್ನು ಆಗ್ರಹಿಸಿ ಮಿಸ್ತ್ರಿ ಅವರಿಗೆ ಪತ್ರ ಬರೆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 24 ರಿಂದ 30 ರವರೆಗೆ ನಾಮಪತ್ರ ಸಲ್ಲಿಸಬಹುದು.
ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವವರು ತಮ್ಮ ರಾಜ್ಯದ 10 ಪ್ರತಿನಿಧಿಗಳ ಹೆಸರನ್ನು ರಾಜ್ಯ ಕಾಂಗ್ರೆಸ್ ಕಚೇರಿಯಲ್ಲಿ ಪರಿಶೀಲಿಸಬಹುದು ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಮಿಸ್ತ್ರಿ ಹೇಳಿದ್ದಾರೆ.