ಲಕ್ನೊ ಹೊಟೇಲ್ ನಲ್ಲಿ ಅಗ್ನಿ ದುರಂತ: 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಆದಿತ್ಯನಾಥ್

Update: 2022-09-11 09:41 GMT
Photo:PTI

ಲಕ್ನೊ: ನಿರ್ಲಕ್ಷ್ಯದ ಕಾರಣದಿಂದ  ಲಕ್ನೊದ ಹೋಟೆಲ್‌ ಲೆವಾನಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಸಾವನ್ನಪ್ಪಿದ ಪ್ರಕರಣಕ್ಕೆ  ಸಂಬಂಧಿಸಿ  ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ (Uttar Pradesh Chief Minister Yogi Adityanath)ಅವರ ಆದೇಶದ ಮೇರೆಗೆ ಐದು ಸರಕಾರಿ ಇಲಾಖೆಗಳ ಒಟ್ಟು 15 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ನಿರ್ಲಕ್ಷ್ಯ ಹಾಗೂ  ಅಕ್ರಮಗಳಿಗಾಗಿ ನಾಲ್ವರು ನಿವೃತ್ತ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು.

ಲಕ್ನೋ ಪೊಲೀಸ್ ಕಮಿಷನರ್ ಎಸ್. ಬಿ. ಶಿರಾಡ್ಕರ್ ಮತ್ತು ಕಮಿಷನರ್ (ಲಕ್ನೋ ವಿಭಾಗ) ರೋಷನ್ ಜೇಕಬ್ ಅವರನ್ನೊಳಗೊಂಡ ದ್ವಿಸದಸ್ಯ ತನಿಖಾ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ ನಂತರ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರಕಾರದ ವಕ್ತಾರರು, ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮಿಷನರ್ ಲಕ್ನೋ ಮತ್ತು ವಿಭಾಗೀಯ ಆಯುಕ್ತ ಲಕ್ನೋ ಅವರ ತನಿಖಾ ವರದಿಯನ್ನು ಸ್ವೀಕರಿಸಿದ ನಂತರ ಮುಖ್ಯಮಂತ್ರಿಯವರು ಈ ಸೂಚನೆಗಳನ್ನು ನೀಡಿದ್ದಾರೆ ಎಂದರು.

ಲಕ್ನೋದ ಹೋಟೆಲ್ ಲೆವಾನಾದಲ್ಲಿ ಸಂಭವಿಸಿದ ಬೆಂಕಿ ಅವಘಡ(fire tragedy that took place at a hotel in Lucknow) ಘಟನೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ ಎಂದು ವಕ್ತಾರ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News