×
Ad

ಉಡುಪಿ; ಸೆ.13ರಂದು ಹೆದ್ದಾರಿ ದುರಸ್ಥಿಗಾಗಿ ವಿನೂತನ ಪ್ರತಿಭಟನೆ

Update: 2022-09-11 20:08 IST

ಉಡುಪಿ, ಸೆ.11: ಇಂದ್ರಾಳಿ ರೈಲ್ವೆ ಸೇತುವೆ ಬಳಿ ಸಂಪೂರ್ಣ ಹದಗೆಟ್ಟಿರುವ ರಾಷ್ಟ್ರೀಯ ಹೆದ್ದಾರಿ ವಿರುದ್ಧ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ನೇತೃತ್ವದಲ್ಲಿ ಸೆ.13ರಂದು ಬೆಳಗ್ಗೆ 10 ಗಂಟೆಗೆ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ರಸ್ತೆಯಲ್ಲಿ ಲಘು ಘನ ವಾಹನಗಳು ಸಂಚಾರ ಪ್ರಯಾಶ ಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸ್ಥಳವು ಅಪಘಾತ ವಲಯವಾಗಿ ಮಾರ್ಪಟ್ಟಿದೆ. ಸಮಸ್ಯೆಯ ಕುರಿತು ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಇದುವರೆಗೂ ಗಮನ ಹರಿಸಿಲ್ಲ. ಸಮಸ್ಯೆಗಳು ಉಲ್ಭಣಗೊಳ್ಳುತ್ತಿವೆ ಎಂದು ಸಮಿತಿ ಸಂಚಾಲಕ ನಿತ್ಯಾನಂದ ಒಳಕಾಡು ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News