×
Ad

ಕೋಡಿ: ನೇತ್ರದಾನ ಮಾಹಿತಿ ಕಾರ್ಯಾಗಾರ

Update: 2022-09-11 20:11 IST

ಕುಂದಾಪುರ, ಸೆ.11: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನೇತ್ರದಾನ ಮಾಹಿತಿ ಕಾರ್ಯಾಗಾರ ಜರಗಿತು.

ಸಂಪನ್ಮೂಲ ವ್ಯಕ್ತಿಗಳಾದ ಬ್ಲಾಕ್ ಆರೋಗ್ಯ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮೀ   ನೇತ್ರದಾನದ ಮಹತ್ವವನ್ನು ತಿಳಿಸಿ, ಕೊಬ್ಬಿನ ಪದಾರ್ಥಗಳನ್ನು ವರ್ಜಿಸುವಂತೆ ಹೇಳಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಸಲಹಾ ಮಂಡಳಿ ಸದಸ್ಯ ಹಾಜಿ ಅಬು ಷೇಕ್ ಅಧ್ಯಕ್ಷತೆ ವಹಿಸಿದ್ದರು. ಹೇಮಾವತಿ ಹಾಗೂ ವಿದ್ಯಾಲಕ್ಷ್ಮೀ  ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಥಮ ಬಿಸಿಎ ವಿದ್ಯಾರ್ಥಿ ಸುಮಂತ್ ವಂದಿಸಿ, ಪ್ರಥಮ ಬಿ.ಕಾಂ ಮುಝಮ್ಮಿಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News