ರಾಜ್ಯದಲ್ಲಿಂದು 379 ಕೊರೋನ ಪ್ರಕರಣ ದೃಢ

Update: 2022-09-11 17:06 GMT
ಸಾಂದರ್ಭಿಕ ಚಿತ್ರ (PTI)

ಬೆಂಗಳೂರು: ರಾಜ್ಯದಲ್ಲಿ ರವಿವಾರ 379 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಒಬ್ಬರು ಮೃತಪಟ್ಟಿದ್ದು, 486 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,58,557ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,217ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 4271ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.  

ಒಬ್ಬರ ಸಾವು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 379 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 3, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 1, ಬೆಂಗಳೂರುನಗರ 198, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 8, ದಕ್ಷಿಣಕನ್ನಡ 18, ಧಾರವಾಡ 10, ಹಾಸನ 12, ಹಾವೇರಿ 1, ಕಲಬುರಗಿ 6, ಕೊಡಗು 9, ಕೋಲಾರ 8, ಮಂಡ್ಯ 6, ಮೈಸೂರು 26, ರಾಯಚೂರು 11, ರಾಮನಗರ 5, ಶಿವಮೊಗ್ಗ 7, ತುಮಕೂರು 11, ಉಡುಪಿ 7, ಉತ್ತರಕನ್ನಡ ಜಿಲ್ಲೆಯಲ್ಲಿ 7 ಪ್ರಕರಣಗಳು ಪತ್ತೆಯಾಗಿವೆ. 

ರಾಜಧಾನಿಯಲ್ಲಿ 198 ಜನರಿಗೆ ಸೋಂಕು ದೃಢ: ರಾಜಧಾನಿಯಲ್ಲಿ ರವಿವಾರದಂದು 198 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 325 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 18,68,576 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,982 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News