ದುಬೈ-ಕೊಚ್ಚಿ ವಿಮಾನ ಯಾನದಲ್ಲಿ ಪ್ರಜ್ಞಾಹೀನರಾಗಿದ್ದ ಮಹಿಳಾ ಯಾತ್ರಿ ಸಾವು

Update: 2022-09-11 18:14 GMT

ಕೊಚ್ಚಿ: ಶನಿವಾರ ದುಬೈನಿಂದ ಬಂದ ವಿಮಾನದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಹಿಳಾ ಯಾತ್ರಿಯೊಬ್ಬರು ಇಲ್ಲಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ರವಿವಾರ ಪೊಲೀಸರು ತಿಳಿಸಿದ್ದಾರೆ.

ಮಿನಿ (56) ಅವರು ದುಬೈನಿಂದ ಕೊಚ್ಚಿಗೆ ಬರುತ್ತಿರುವ ಸಮಯದಲ್ಲಿ ಪ್ರಜ್ಞಾಹೀನರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

"ವಿಮಾನ ಇಳಿದ ನಂತರ ಅವರನ್ನು ತಕ್ಷಣವೇ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು" ಎಂದು ಪೊಲೀಸರು ತಿಳಿಸಿದ್ದಾರೆ.

ಅವರು ಕೆಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಸಹಜ ಸಾವು ಪ್ರಕರಣವಾಗಿದ್ದರಿಂದ ಈ ಬಗ್ಗೆ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು TNIE ವರದಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News