×
Ad

ಕಲ್ಲಡ್ಕ: ಮರದಿಂದ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು

Update: 2022-09-12 16:01 IST

ಬಂಟ್ವಾಳ, ಸೆ.12: ಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕರಿಯಾಗದೆ ಮೃತಪಟ್ಟಿರುವ ಘಟನೆ ಕಲ್ಲಡ್ಕದ ಸಮೀಪದ ಅಮ್ಟೂರಿನಲ್ಲಿ ನಡೆದಿರುವುದು ವರದಿಯಾಗಿದೆ.

ತಾಲೂಕಿನ ಕೋಡಪದವು ನಿವಾಸಿ ಸುಲೈಮಾನ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (32) ಮೃತಪಟ್ಟ ಯುವಕ.

ಅಮ್ಟೂರಿನಲ್ಲಿ ಅಜ್ಜನ ಮನೆಯಲ್ಲಿ ವಾಸವಿರುವ ಮುಹಮ್ಮದ್ ಶರೀಫ್ ಮರ ಕಡಿಯುವ ಕೆಲಸ ಮಾಡುತ್ತಿದ್ದರು. ರವಿವಾರ ಅಮ್ಟೂರಿನಲ್ಲಿ ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ.

ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕ್ಸಿಗೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಸೋಮವಾರ ಮೃತಪಟ್ಟಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ, ಐದು ತಿಂಗಳ ಮಗು ಸಹಿತ ಬಂಧುಬಳಗವನ್ನು ಅಗಲಿದ್ದಾರೆ.

ಇದನ್ನೂ ಓದಿ: ಅಕ್ರಮ ಕ್ವಾರಿಗಳ ವಿರುದ್ಧ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತನಿಗೆ ಟ್ರಕ್ ಢಿಕ್ಕಿ ಹೊಡೆಸಿ ಕೊಂದ ಮಾಲಕನ ಬಂಧನ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News