ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ
Update: 2022-09-12 21:34 IST
ಉಡುಪಿ, ಸೆ.12: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು. ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್‌ಗಳ ಅಧಿಕಾರಿ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಸೆಪ್ಟಂಬರ್16ರ ಒಳಗೆ ತಮ್ಮ ಹೆಸರನ್ನು ನೊಂದಾಯಿಸಿ ಕೊಳ್ಳಲು ದೂರವಾಣಿ ಸಂಖ್ಯೆ: 0821-2515944, 9964760090ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.