ಸೆ.22ರಂದು ‘ಕೆವೈಸಿ’ಗೆ ಕೊನೆಯ ಅವಕಾಶ
Update: 2022-09-12 21:38 IST
ಮಂಗಳೂರು, ಸೆ.12: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ-ಕಿಸಾನ್)ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಲು ಸೆ. 22 ಕೊನೆಯ ದಿನವಾಗಿದೆ.
ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಸ್ಮಾರ್ಟ್ ಫೋನ್ ಬಳಸುವ ರೈತರು
ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್‌ಸಿ)/ ಗ್ರಾಮ ಒನ್ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.