×
Ad

ಸಿಕಂದರಾಬಾದ್‌: ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್‌ನಲ್ಲಿಅಗ್ನಿ ಅವಘಡ; ಎಂಟು ಮಂದಿ ಮೃತ್ಯು

Update: 2022-09-13 09:59 IST
Photo:twitter

ಸಿಕಂದರಾಬಾದ್: ತೆಲಂಗಾಣದ ಸಿಕಂದರಾಬಾದ್‌ನಲ್ಲಿ ನಿನ್ನೆ ತಡರಾತ್ರಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್‌ನಲ್ಲಿ ಕಾಣಿಸಿಕೊಂಡ ಭಾರೀ ಬೆಂಕಿಯು(Fire At Secunderabad E-Scooter Showroom)  ಬಹುಮಹಡಿ ಕಟ್ಟಡದ ಮೇಲಿನ ಮಹಡಿಯಲ್ಲಿರುವ ಹೋಟೆಲ್‌ಗೆ ವ್ಯಾಪಿಸಿದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಹಾಗೂ  ಹಲವರು ಗಾಯಗೊಂಡಿದ್ದಾರೆ ಎಂದು NDTV ವರದಿ ಮಾಡಿದೆ.

ಬಹುಮಹಡಿ ಕಟ್ಟಡದ ನೆಲ ಮಹಡಿಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಅದು  ಶೀಘ್ರದಲ್ಲೇ ಮೊದಲ ಮತ್ತು ಎರಡನೇ ಮಹಡಿಯಲ್ಲಿನ ರೂಬಿ ಹೋಟೆಲ್‌ಗೆ ಹರಡಿತು.  ಅಲ್ಲಿ ಕನಿಷ್ಠ 25 ಅತಿಥಿಗಳು ತಂಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಗೆಯಿಂದ ಉಸಿರುಕಟ್ಟುವಿಕೆಯಿಂದಾಗಿ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.

ಅಗ್ನಿಶಾಮಕ ಇಲಾಖೆಯು ಕ್ರೇನ್ ಏಣಿಗಳನ್ನು ಬಳಸಿ ಹಲವಾರು ಜನರನ್ನು ರಕ್ಷಿಸಿತು, ಕೆಲವು ಸ್ಥಳೀಯರು ಸಹ ಸೇರಿಕೊಂಡು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಕೆಲವರು ಹೋಟೆಲ್ ಕಿಟಕಿಗಳಿಂದ ಜಿಗಿಯಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಂಡುಬಂದಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News