×
Ad

ಶಿವಮೊಗ್ಗ: ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಕಾಲು ಜಾರಿ ಬಿದ್ದು ತಂದೆ, ಮಗ ಮೃತ್ಯು

Update: 2022-09-13 12:50 IST
ಸಾಂದರ್ಭಿಕ ಚಿತ್ರ- (PTI)

ಶಿವಮೊಗ್ಗ: ಚಲಿಸುತ್ತಿದ್ದ ರೈಲು (Train) ಹತ್ತಲು ಯತ್ನಿಸಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆ ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ಘಟನೆ ನಡೆದಿದೆ. 

ತಾಳಗುಪ್ಪ – ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿದ ಇವರಿಬ್ಬರು ಸಾವನಪ್ಪಿದ್ದಾರೆ. ರವಿವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮೋಹನ್ ಪ್ರಸಾದ್ (70 ವ) ಮತ್ತು ಅಮರನಾಥ್ (30 ವ) ಮೃತರು ಎಂದು ಗುರುತಿಸಲಾಗಿದೆ. 

ತಂದೆ ಮತ್ತು ಮಗ ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ ತೆರಳಬೇಕಿತ್ತು. ನಿಲ್ದಾಣಕ್ಕೆ ಬಂದಾಗ ರೈಲು ಹೊರಟಿತ್ತು. ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಗ ಅಮರನಾಥ್ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಆತನ ರಕ್ಷಣೆಗೆ ಧಾವಿಸಿದ ಮೋಹನ್ ಪ್ರಸಾದ್ ಅವರು ರೈಲಿನ ಅಡಿಗೆ ಸಿಲುಕಿದ್ದಾರೆ ಎನ್ನಲಾಗಿದೆ.

ಮೋಹನ್ ಪ್ರಸಾದ್ ಅವರು ವಿಐಎಸ್ಎಲ್ ನಿವೃತ್ತ ನೌಕರರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಭದ್ರಾವತಿಯಲ್ಲಿರುವ ಮಗನ ಮನೆಗೆ ಬಂದಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ>>> ಉಡುಪಿ: ಇಂದ್ರಾಳಿ ಬಳಿ ಹೆದ್ದಾರಿ ದುರಸ್ತಿಗೆ ಒತ್ತಾಯಿಸಿ ಉರುಳು ಸೇವೆಯ ಮೂಲಕ ವಿನೂತನ ಪ್ರತಿಭಟನೆ

ಇದನ್ನೂ ಓದಿ>>> ಭದ್ರಾವತಿ | ಗಣಪತಿ ಮೆರವಣಿಗೆ ವೇಳೆ ಯುವಕನಿಗೆ ಚೂರಿ ಇರಿತ ಪ್ರಕರಣ; ಆರೋಪಿ ಮನೋಜ್ ಕುಮಾರ್ ವಶಕ್ಕೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News