×
Ad

ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್: ಕಾಂಗ್ರೆಸ್

Update: 2022-09-13 16:31 IST
ಕಾಂಗ್ರೆಸ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿರುವ ಫೋಟೊ

ಮಂಗಳೂರು: ಇತ್ತೀಚೆಗೆ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೂಳೂರು ಸೇತುವೆ ಮೇಲಿನ ಗುಂಡಿಗಳನ್ನು ಮುಚ್ಚುವ ಸಲುವಾಗಿ ಹಾಕಿದ್ದ ಡಾಂಬರು ಹತ್ತೇ ದಿನಗಳಲ್ಲಿ ಕಿತ್ತುಹೋಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. 

ಈ ಸಂಬಂಧ ಮಂಗಳವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಮಂಗಳೂರಿನ ಕೂಳೂರು ಸೇತುವೆಯಲ್ಲಿ ಪ್ರಧಾನಿ ಭೇಟಿ ವೇಳೆ ಹಾಕಿದ್ದ ಕಳಪೆ ಡಾಂಬರು ಫೋಟೊ ಪೋಸ್ಟ್ ಮಾಡುವ ಮೂಲಕ ರಾಜ್ಯ ಸರಕಾರವನ್ನು ತರಾಟೆಗೆ ತೆಗದುಕೊಂಡಿದೆ. 

''ನಿಮ್ಮ ಸರ್ಕಾರದ 40% ಕಮಿಷನ್ ಲೂಟಿಗೆ ಇನ್ಯಾವ ಸಾಕ್ಷಿ ಬೇಕು  ಇದೇ ರಸ್ತೆಯ ಮೇಲೆ ಬಂದು "ಡಬಲ್ ಇಂಜಿನ್ ಅಭಿವೃದ್ಧಿಯಾಗುತ್ತದೆ" ಎಂದು ಭಾಷಣ ಮಾಡಿದ್ದ ನರೇಂದ್ರ ಮೋದಿ ಅವರೇ, ಈ ಲೂಟಿ ತನಿಖೆಗೆ ಅರ್ಹವಲ್ಲವೇ? ಬಿಜೆಪಿ ಸರ್ಕಾರದ ರಸ್ತೆ ಡಾಂಬಾರಿಗಿಂತ ಅಡುಗೆ ಮನೆಯಲ್ಲಿ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್!'' ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. 

ಇದನ್ನೂ ಓದಿ: ಚಡ್ಡಿ ಸುಟ್ಟಿರುವ ಕಾಂಗ್ರೆಸ್​​ನವರು ಕೂಡ ಚಡ್ಡಿ ಹಾಕಿ ಶಾಖೆಗೆ ಬರುವ ದಿನ ದೂರವಿಲ್ಲ: ಸಿ.ಟಿ ರವಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News