ಪಿಎಸ್ಸೈ ನೇಮಕಾತಿ ಹಗರಣ: ಮರು ಪರೀಕ್ಷೆ ಆದೇಶ ಹಿಂಪಡೆಯಲು ಅಭ್ಯರ್ಥಿಗಳ ಪಟ್ಟು
Update: 2022-09-13 18:40 IST
ಬೆಂಗಳೂರು, ಸೆ.13: ಪಿಎಸ್ಸೈ ನೇಮಕಾತಿ ಹಗರಣ ಪ್ರಕರಣ ಸಂಬಂಧ ರಾಜ್ಯ ಸರಕಾರ ಈಗಾಗಲೇ ಹೊರಡಿಸಿರುವ ಮರು ಪರೀಕ್ಷೆಯ ಆದೇಶ ವಾಪಸ್ಸು ಪಡೆಯುವಂತೆ ಆಗ್ರಹಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.
ಮಂಗಳವಾರ ನಗರದ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಜಮಾಯಿಸಿದ ಅಭ್ಯರ್ಥಿಗಳು, ಪಿಎಸ್ಸೈ ನೇಮಕಾತಿಗೆ ಹೊರಡಿಸಿರುವ ಮರುಪರೀಕ್ಷೆ ಆದೇಶ ಹಿಂಪಡೆದು, ಪ್ರಾಮಾಣಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವಂತೆ ಒತ್ತಾಯಿಸಿದರು.
ಪರೀಕ್ಷಾ ಪ್ರಕ್ರಿಯೆಯಲ್ಲಿ ಅವ್ಯವಹಾರ ಕಂಡು ಬಂದ ಹಿನ್ನೆಲೆ ಸರಕಾರ ಮರುಪರೀಕ್ಷೆಗೆ ಆದೇಶ ನೀಡಿತ್ತು. ಆದರೆ, ಇದು ಸಮಂಜಸವಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ನಾವು ಬಡ ಕುಟುಂಬದವರು, ಕಷ್ಟಪಟ್ಟು ಓದಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದೇವೆ. ಸರಕಾರ ನಮಗೆ ಅನ್ಯಾಯ ಮಾಡಬಾರದು ಎಂದು ಪ್ರತಿಭಟನಾನಿರತ ಅಭ್ಯರ್ಥಿಗಳು ಹೇಳಿದರು.