ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಶತಮಾನೋತ್ಸವ ಕಟ್ಟಡ ನಿರ್ಮಾಣ
ಮಂಗಳೂರು, ಸೆ.13: ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕಾರ್ಪೋರೇಷನ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಯೋಜನೆಯಡಿ ನಗರದ ರೆಡ್‌ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಭವನ ನಿರ್ಮಾಣ ಕಾಮಗಾರಿಗೆ 10 ಲಕ್ಷ ರೂ.ಗಳ ಚೆಕ್ ಅನ್ನು ಮಂಗಳವಾರ ಕೊಟ್ಟಾರದ ಜಿಪಂ ಮಿನಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು.
ಬ್ಯಾಂಕ್ ಆಫ್ ಇಂಡಿಯಾದ ಎಂಡಿ ಹಾಗೂ ಸಿಇಒ ಅಟನ್ ಕುಮಾರ್ ದಾಸ್ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್. ಶಾಂತರಾಮ ಶೆಟ್ಟಿ ಹಾಗೂ ಉಪಾಧ್ಯಕ್ಷ ಜಿಪಂ ಸಿಇಒ ಡಾ. ಕುಮಾರ್ ಅವರಿಗೆ ಹಸ್ತಾಂತರಿಸಿದರು.
ಕಾರ್ಯಕ್ರಮದಲ್ಲಿ ಇಂಡಿಯನ್ ಬ್ಯಾಂಕ್ ಜನರಲ್ ಮ್ಯಾನೇಜರ್ ವಿವೇಕಾನಂದ ದುಬೆ, ವಲಯ ಮ್ಯಾನೇಜರ್ ಎಂ.ಪಿ. ಸುರೇಶ್, ರೆಡ್‌ಕ್ರಾಸ್ ಸೊಸೈಟಿಯ ದ.ಕ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಿ.ಕೆ. ಕುಸುಮಾದರ್, ಉಪಾಧ್ಯಕ್ಷ ಡಾ.ಸತೀಶ್ ರಾವ್, ಖಜಾಂಚಿ ಮೋಹನ್ ಶೆಟ್ಟಿ ಕೆ., ನಿರ್ದೇಶಕರಾದ ಡಾ.ಸಚ್ಚಿದಾನಂದ ರೈ, ಗುರುದತ್ ಎಂ.ನಾಯಕ್, ಪಿ.ಬಿ. ಹರಿಪ್ರಸಾದ್ ರೈ ಉಪಸ್ಥಿತರಿದ್ದರು. ಡಾ.ಸುಮನಾ ಬಿ. ಕಾರ್ಯಕ್ರಮ ನಿರೂಪಿಸಿದರು.