×
Ad

ಆಸ್ಟ್ರೇಲಿಯಾ ಕಸಾಪ ಗೌರವ ಅಧ್ಯಕ್ಷರಾಗಿ ಸತೀಶ್ ಭದ್ರಣ್ಣ ನೇಮಕ

Update: 2022-09-13 22:56 IST

ಬೆಂಗಳೂರು, ಸೆ.13: ಆಸ್ಟ್ರೇಲಿಯಾ ದೇಶದ ಕನ್ನಡ ಸಾಹಿತ್ಯ ಪರಿಷತ್ತಿನ ಹೊರದೇಶ ಘಟಕದ ಗೌರವ ಅಧ್ಯಕ್ಷರಾಗಿ ಸತೀಶ್ ಭದ್ರಣ್ಣ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಶಿ ಅವರು ನೇಮಕ ಮಾಡಿ ಆದೇಶ ನೀಡಿದ್ದಾರೆ.

ಮಹೇಶ ಜೋಶಿ ಅವರ ಅಧ್ಯಕ್ಷಾವಧಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳಿಗೆ ತಿದ್ದುಪಡಿ ತಂದು ವಿದೇಶಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಗಳನ್ನು ಸ್ಥಾಪಿಸಲು ಅವಕಾಶ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿದೇಶಗಳಲ್ಲಿ ಘಟಕಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳುತ್ತಿದೆ. ಕನ್ನಡಿಗರು ಹೆಚ್ಚಾಗಿರುವ ವಿದೇಶಿ ನೆಲದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಘಟಕಗಳನ್ನು ಸ್ಥಾಪಿಸುವ ಮೂಲಕ ಪ್ರಪಂಚದಲ್ಲಿರುವ ಎಲ್ಲ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶವನ್ನು ಹೊಂದಿದೆ.

ಆಸ್ಟ್ರೇಲಿಯಾ ದೇಶದಲ್ಲಿ ಕನ್ನಡಪರ ಕಾರ್ಯಚಟುವಟಿಕೆಗಳನ್ನು ಕ್ರಿಯಾಶೀಲವಾಗಿ ನಡೆಸುವುದರ ಮೂಲಕ ಕನ್ನಡ ನಾಡು-ನುಡಿಯ ಸೇವೆಯನ್ನು ಸಲ್ಲಿಸುತ್ತಿರುವ ಸತೀಶ ಭದ್ರಣ್ಣ ಅವರಿಂದ ಹೆಚ್ಚು ಹೆಚ್ಚು ಕನ್ನಡ ಭಾಷೆ, ಕಲೆ-ಸಂಸ್ಕೃತಿ, ಸಾಹಿತ್ಯದ ಏಳಿಗೆಗೆ ಇನ್ನಷ್ಟು ಸೇವೆ ನೀಡಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಶಿ ಆಶಿಸಿದ್ದಾರೆ.

ಈ ಹಿಂದೆ ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡುವ ಮೂಲಕ ಕನ್ನಡಿಗರೆಲ್ಲರ ಪ್ರೀತಿಗೆ ಪಾತ್ರರಾಗಿದ್ದ ಚಂದ್ರ ಆರ್ಯ ಅವರನ್ನು ಕೆನಡಾ ದೇಶದ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿರುವುದನ್ನು ಅಧ್ಯಕ್ಷರು ಸ್ಮರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News