ಕಲಬುರಗಿ | ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ವಸತಿ ಶಾಲೆಯ ಪ್ರಾಂಶುಪಾಲ, ಕಂಪ್ಯೂಟರ್ ಆಪರೇಟರ್ ಬಂಧನ

Update: 2022-09-13 18:07 GMT
ಸಾಂದರ್ಭೀಕ ಚಿತ್ರ

ಕಲಬುರಗಿ,ಸೆ.13: ಜಿಲ್ಲೆಯ ಚಿಂಚೋಳಿ ತಾಲೂಕಿನ ವಸತಿ ಶಾಲೆಯೊಂದರಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಸತಿ ಶಾಲೆಯ ಪ್ರಾಂಶುಪಾಲ ಚೇತನ್ ರೆಡ್ಡಿ ಹಾಗೂ ಕಂಪ್ಯೂಟರ್ ಆಪರೇಟರ್ ಸಂಗಮೇಶ ವಿರುದ್ಧ ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಹಾಗೂ ಜಾತಿನಿಂದನೆ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ.

ಚೇತನರೆಡ್ಡಿ ಹಾಗೂ ಸಂಗಮೇಶ ಅವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಶಾಲೆಯ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೋಷಕರು ಮತ್ತು ಗ್ರಾಮಸ್ಥರು ಸೋಮವಾರ ಶಾಲೆಗೆ ತೆರಳಿ ಮುಖ್ಯ ಶಿಕ್ಷಕ ಹಾಗೂ ಕಂಪ್ಯೂಟರ್ ಆಪರೇಟರ್ ಇಬ್ಬರಿಗೂ ಥಳಿಸಿದ್ದರು ಎನ್ನಲಾಗಿದೆ. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭುಲಿಂಗ್ ಅವರು ಭೇಟಿ ನೀಡಿ ಪಾಲಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ್ದರು. 

ಬಳಿಕ ಪ್ರಾಂಶುಪಾಲ ಚೇತನ್ ರೆಡ್ಡಿ ಮತ್ತು ಕಂಪ್ಯೂಟರ್ ಆಪರೇಟರ್ ಸಂಗಮೇಶ್ ವಿರುದ್ಧ ತಾಲೂಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರಭುಲಿಂಗ ಅವರು ಕೊಂಚಾವರಂ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯದಡಿ ದೂರು ಸಲ್ಲಿಸಿದ್ದರು.

ಈ ದೂರಿನ ಅನ್ವಯ ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News