ಹಳೆಯಂಗಡಿ; ಟ್ಯಾಂಕರ್‌ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2022-09-14 02:48 GMT

ಮುಲ್ಕಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಮುಖ್ಯ ಜಂಕ್ಷನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.

ಮೃತ ಯುವಕನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಚರಣ್ ರಾಜ್ (28) ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಉಡುಪಿಯತ್ತ ಹೋಗುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಚರಣ್ ರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News