ದೇವೇಂದ್ರ ಫಡ್ನವಿಸ್ ಪತ್ನಿಯ ಬಗ್ಗೆ ಫೇಸ್‌ಬುಕ್ ನಲ್ಲಿ ನಿಂದನೆ: ಮಹಿಳೆಯ ಬಂಧನ

Update: 2022-09-14 04:59 GMT
ಅಮೃತಾ ಫಡ್ನವಿಸ್ , Photo:instagram

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ (Amruta Fadnavis, Maharashtra Deputy Chief Minister Devendra Fadnavis's wife)ಅವರ ಫೇಸ್‌ಬುಕ್ ಪುಟದಲ್ಲಿ ನಿಂದನೀಯ ಹಾಗೂ  ಅಸಭ್ಯವಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ 50 ವರ್ಷದ ಮಹಿಳೆಯೊಬ್ಬರನ್ನು ಸೈಬರ್ ಪೊಲೀಸ್ ಇಲಾಖೆ ಮಂಗಳವಾರ ಬಂಧಿಸಿದೆ.

ಬಂಧಿತ ಮಹಿಳೆ ಸ್ಮೃತಿ ಪಾಂಚಾಲ್ ಅವರು ಕಳೆದ ಎರಡು ವರ್ಷಗಳಿಂದ ಅಮೃತಾ ಫಡ್ನವಿಸ್ ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಪುಟದಲ್ಲಿ ಅನೇಕ ನಕಲಿ ಖಾತೆಗಳನ್ನು ಬಳಸಿಕೊಂಡು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಂಚಾಲ್ ಅವರು 53 ನಕಲಿ ಫೇಸ್‌ಬುಕ್ ಐಡಿಗಳು ಹಾಗೂ  13 ಜಿಮೇಲ್ ಖಾತೆಗಳನ್ನು ರಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲ್ಲಿನ ನ್ಯಾಯಾಲಯವು ಗುರುವಾರದವರೆಗೆ ಸ್ಮೃತಿ ಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ, ಪೊಲೀಸರು ಆಕೆಯ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News