×
Ad

ದ್ವೇಷ ಭಾಷಣ ನೀಡುವ ರಾಜಕೀಯ ಪಕ್ಷಗಳು, ಸದಸ್ಯರನ್ನು ನಿಷೇಧಿಸುವ ಅಧಿಕಾರವಿಲ್ಲ: ಸುಪ್ರೀಂ ಕೋರ್ಟಿಗೆ ತಿಳಿಸಿದ ಚು. ಆಯೋಗ

Update: 2022-09-14 16:13 IST

ಹೊಸದಿಲ್ಲಿ: ದ್ವೇಷದ ಭಾಷಣ ನೀಡಿದ್ದಾರೆಂಬ ಕಾರಣಕ್ಕೆ ಯಾವುದೇ ರಾಜಕೀಯ ಪಕ್ಷ (political parties) ಅಥವಾ ಅದರ ಸದಸ್ಯರನ್ನು ನಿಷೇಧಿಸುವ ಅಧಿಕಾರ ತನಗಿಲ್ಲ ಎಂದು ಭಾರತದ ಚುನಾವಣಾ ಆಯೋಗ (Election Commission) ಬುಧವಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ.

ದ್ವೇಷದ ಭಾಷಣವನ್ನು ನಿಯಂತ್ರಿಸಲು ಯಾವುದೇ ನಿರ್ದಿಷ್ಟ ಕಾನೂನು ಇಲ್ಲದ ಕಾರಣ ರಾಜಕೀಯ ಪಕ್ಷಗಳು ಸಮಾಜದ ಸಾಮರಸ್ಯ ಕೆಡಿಸುವಂತಹ ಹೇಳಿಕೆಗಳನ್ನು ನೀಡದಂತೆ ತಡೆಯಲು ತಾನು ಐಪಿಸಿ ಹಾಗೂ ಜನ ಪ್ರಾತಿನಿಧ್ಯ ಕಾಯಿದೆಯನ್ವಯ ಕ್ರಮ ಕೈಗೊಂಡಿರುವುದಾಗಿ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿರುವ ಅಫಿಡವಿಟ್‍ನಲ್ಲಿ ಆಯೋಗ ಹೇಳಿದೆ.

ದ್ವೇಷದ ಭಾಷಣ ಕುರಿತಂತೆ ಕಾನೂನು ಆಯೋಗದ ವರದಿ 267 ರಲ್ಲಿ ಮಾಡಲಾದ ಶಿಫಾರಸುಗಳನ್ನು ಜಾರಿಗೊಳಿಸುವಂತೆ ಕೇಂದ್ರಕ್ಕೆ ಸೂಚಿಸಬೇಕು ಎಂದು ಕೋರಿ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಗೆ ತನ್ನ ಪ್ರತಿಕ್ರಿಯೆಯಲ್ಲಿ ಆಯೋಗ ಮೇಲಿನಂತೆ ಹೇಳಿದೆ.

ಕಾನೂನು ಆಯೋಗದ ವರದಿಯು ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳ ಮಾನ್ಯತೆ ರದ್ದುಗೊಳಿಸಲು ಮತ್ತು ಅನರ್ಹಗೊಳಿಸಲು ಚುನಾವಣಾ ಆಯೋಗಕ್ಕೆ ಅಧಿಕಾರ ನೀಡುವುದಿಲ್ಲವಾದರೂ  ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಕ್ರಿಮಿನಲ್ ಕಾನೂನಿನಲ್ಲಿ ತಿದ್ದುಪಡಿಗಳಿಗೆ ಅದು ಶಿಫಾರಸು ಮಾಡಿದೆ.

ಇದನ್ನೂ ಓದಿ: ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಇಂಜಿನ್ ನಲ್ಲಿ ಬೆಂಕಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News