ಬಳ್ಳಾರಿ | ವಿದ್ಯುತ್ ಸಂಪರ್ಕ ಕಡಿತ: ಐಸಿಯುನಲ್ಲಿದ್ದ ಇಬ್ಬರು ರೋಗಿಗಳು ಮೃತ್ಯು

Update: 2022-09-14 18:48 GMT
ಸಾಂದರ್ಭಿಕ ಚಿತ್ರ

ಬಳ್ಳಾರಿ, ಸೆ. 14: ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ಇಬ್ಬರು ರೋಗಿಗಳು ಮೃತಪಟ್ಟಿರುವ ಘಟನೆ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ(ವಿಮ್ಸ್) ಬುಧವಾರ ನಡೆದಿರುವುದಾಗಿ ವರದಿಯಾಗಿದೆ.

ಮೃತರನ್ನು ಮೌಲಾ ಹುಸೇನ್ ಮತ್ತು ಚಿಟ್ಟೆಮ್ಮ ಎಂದು ಗುರುತಿಸಲಾಗಿದೆ. ವಿಮ್ಸ್‌ನಲ್ಲಿ ಬೆಳಿಗ್ಗೆ 6ರಿಂದ 10ಗಂಟೆವರೆಗೆ ವಿದ್ಯುತ್ ಕಡಿತಗೊಂಡಿತ್ತು. ಆಸ್ಪತ್ರೆಯಲ್ಲಿ ಜನರೇಟರ್ ಇದ್ದರೂ ಕೆಲಸ ಮಾಡದ ಪರಿಣಾಮ ಐಸಿಯುನಲ್ಲಿದ್ದ ವೆಂಟಿಲೇಟರ್‌ಗಳು ಸ್ಥಗಿತಗೊಂಡು ರೋಗಿಗಳು ಮೃತಪಟ್ಟಿದ್ದಾರೆ ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ.

ಮೌಲಾ ಹುಸೇನ್‌ರಿಗೆ ಮೂತ್ರಪಿಂಡ ಸೇರಿದಂತೆ ಗಂಭೀರ ಸಮಸ್ಯೆಗಳಿದ್ದವು. ಚಿಟ್ಟೆಮ್ಮ ಅವರಿಗೆ ಹಾವು ಕಡಿದಿತ್ತು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News