ಕರ್ನಾಟಕದ ಬೆಟ್ಟ ಕುರುಬ ಜನಾಂಗ ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೆ ಕೇಂದ್ರ ಒಪ್ಪಿಗೆ; ಸಿದ್ದರಾಮಯ್ಯ ಸ್ವಾಗತ

Update: 2022-09-14 17:41 GMT

ಬೆಂಗಳೂರು: ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. 

''ಸುಮಾರು ಮೂರು ವರೆ ವರ್ಷಗಳ ನಂತರ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದ್ದು, ಇಲ್ಲಿಯ ವರೆಗೆ ಮೀಸಲಾತಿ ಸೌಲಭ್ಯದಿಂದಲೇ ವಂಚಿತರಾಗಿದ್ದ ಬೆಟ್ಟ ಕುರುಬ ಸಮುದಾಯದ ಜನ ಶಿಕ್ಷಣ, ಉದ್ಯೋಗ ಮತ್ತು ರಾಜಕೀಯ ಮೀಸಲಾತಿಯ ಲಾಭ ಪಡೆದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶ-ಪ್ರಾತಿನಿಧ್ಯ ಪಡೆದು ಬೆಳೆಯಲಿ ಎಂದು ಆಶಿಸುತ್ತೇನೆ'' ಎಂದು ತಿಳಿಸಿದ್ದಾರೆ. 

''ಬೆಟ್ಟ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕೇಂದ್ರ ಸರ್ಕಾರದ ನಿರ್ಣಯವನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಈ ಸಮುದಾಯದ ಬಹುಕಾಲದ ಬೇಡಿಕೆಯಂತೆ ನಮ್ಮ ಸರ್ಕಾರ ಮೈಸೂರಿನ ಬುಡಕಟ್ಟು ಅಧ್ಯಯನ ಸಂಸ್ಥೆಯಿಂದ ಕುಲಶಾಸ್ತ್ರೀಯ ಅಧ್ಯಯನ ನಡೆಸಿತ್ತು.ಆ ಅಧ್ಯಯನದ ವರದಿ ಆಧಾರದಲ್ಲಿ ಕಾಡು ಕುರುಬ ಜಾತಿ ಸೂಚಕಕ್ಕೆ ಸಮನಾರ್ಥ ಹೊಂದಿರುವ ಬೆಟ್ಟಕುರುಬರನ್ನು ಕೂಡಾ ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ನಮ್ಮ ಸರ್ಕಾರ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು'' ಎಂದು ಹೇಳಿದ್ದಾರೆ. 

ಇದನ್ನೂ ಓದಿ: ಕರ್ನಾಟಕದ ಬೆಟ್ಟ ಕುರುಬ ಜನಾಂಗ ಪರಿಶಿಷ್ಟ ವರ್ಗಕ್ಕೆ ಸೇರ್ಪಡೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News