ದೇವಾಲಯಗಳ ಆಸ್ತಿ ಒತ್ತುವರಿ ತೆರವಿಗೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

Update: 2022-09-15 04:39 GMT

ಬೆಂಗಳೂರು ರಾಜ್ಯಾದ್ಯಂತ ದೇವಾಲಯಗಳ ಆಸ್ತಿಯನ್ನು ಸಮೀಕ್ಷೆ ನಡೆಸಲು ಸರಕಾರ ಮುಂದಾಗಿದ್ದು, ಒತ್ತುವರಿ ಮಾಡಿಕೊಂಡಿರುವವರು ಎಷ್ಟೇ ಪ್ರಬಲವಾಗಿದ್ದರೂ ನಿರ್ದಾಕ್ಷಿಣ್ಯವಾಗಿ ತೆರವು ಮಾಡಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಬುಧವಾರ ಪರಿಷತ್‍ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇವಾಲಯಗಳ ಆಸ್ತಿ ಸಮೀಕ್ಷೆ ಮಾಡುವುದರಿಂದ ರಾಜ್ಯಾದ್ಯಂತ ಯಾವ ದೇವಾಲಯಗಳಲ್ಲಿ ಎಷ್ಟು ಒತ್ತುವರಿಯಾಗಿದೆ ಎಂಬುದು ಪತ್ತೆಯಾಗಲಿದೆ. ಅದನ್ನು ಆಧರಿಸಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ದೇವಾಲಯಗಳ ಆಸ್ತಿ ಸಮೀಕ್ಷೆಗೆ ಸಂಬಂಧ 5 ಜನರ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ನೀಡುವ ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ 3-4 ತಿಂಗಳಲ್ಲಿ ಒತ್ತುವರಿ ತೆರವಿಗೆ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು. 

ಇದನ್ನೂ ಓದಿ: ಕಲಬುರಗಿ ಪಾಲಿಕೆಗೆ ಆಯ್ಕೆಯಾದ ಮತ್ತೊಬ್ಬ ಬಿಜೆಪಿ ಅಭ್ಯರ್ಥಿಯ ಸದಸ್ಯತ್ವ ಅಸಿಂಧು

229 ಕಟ್ಟಡ ಒತ್ತುವರಿ ಬೆಂಗಳೂರು ನಗರದ ತಿಗಳರ ಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಾಲಯದ ಸರ್ವೆ ನಂ. 79 ರಲ್ಲಿ 15 ಎಕರೆ 12 ಗುಂಟೆ ಮತ್ತು ಹೊಂಗಸಂದ್ರ ಗ್ರಾಮದ ಸರ್ವೆ ನಂಬರ್ 33 ರಲ್ಲಿ 16 ಎಕರೆ 25 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡು 229 ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ಅವರು ತಿಳಿಸಿದರು.  

ಕಟ್ಟಡ ನಿರ್ಮಾಣ ಮಾಡಿಕೊಂಡಿರುವುದೂ ಅಲ್ಲದೆ ಅದನ್ನು ಮಾನ್ಯ ಮಾಡುವಂತೆ ನ್ಯಾಯಾಲಯಕ್ಕೆ ಹೋಗಿದ್ದರು. ನ್ಯಾಯಾಲಯ ಅವರ ಅರ್ಜಿಯನ್ನು ತಿರಸ್ಕರಿಸಿ ಇಲಾಖೆಯ ಪರವಾಗಿಯೇ ಆದೇಶ ನೀಡಿದೆ ಎಂದು ಹೇಳಿದರು. 229 ಅನಧಿಕೃತ ಒತ್ತುವರಿದಾರರ ಪೈಕಿ 18 ಜನರ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ಒತ್ತುವರಿದಾರರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಬಳ್ಳಾರಿ | ವಿದ್ಯುತ್ ಸಂಪರ್ಕ ಕಡಿತ: ಐಸಿಯುನಲ್ಲಿದ್ದ ಇಬ್ಬರು ರೋಗಿಗಳು ಮೃತ್ಯು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News