ಪುತ್ತೂರು | ಅಂಗಡಿಗೆ ಬಂದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಯುವಕನ ಬಂಧನ

Update: 2022-09-15 06:59 GMT

ಪುತ್ತೂರು: ಅಂಗಡಿಯೊಂದರಲ್ಲಿ ಸಾಮಾನು ಖರೀದಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. 

ತಾಲೂಕಿನ ಸರ್ವೆ ಸೊರಕೆ ನಿವಾಸಿ ಬದ್ರುದ್ದೀನ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. 

ಪುತ್ತೂರು ತಾಲೂಕಿನ ತಿಂಗಳಾಡಿಯಲ್ಲಿರುವ ಅಂಗಡಿಯೊಂದಕ್ಕೆ  ಮಹಿಳೆಯೊಬ್ಬರು ಸೆ.14ರಂದು (ಬುಧವಾರ) ಸಂಜೆ  ಸಾಮಾನು ಖರೀದಿಸಲೆಂದು ಬಂದಿದ್ದರು. ಅಂಗಡಿ ಮಾಲಕ ಹೊರಗಡೆ ಹೋಗಿದ್ದ ಸಂದರ್ಭ ಅಂಗಡಿಯಲ್ಲಿದ್ದ ಸೊರಕೆ ಓಲೆಮುಂಡೋವು ಸಮೀಪದ ಬದ್ರುದ್ದೀನ್ ಎಂಬಾತ ಮಹಿಳೆಯ ಮೈಮೇಲೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಸ್ಥಳದಲ್ಲಿ ನೂರಾರು ಮಂದಿ ಹಿಂದುತ್ವ ಸಂಘಟನೆಯ ಯುವಕರು ಜಮಾಯಿಸಿದ್ದರು. 

ಇದನ್ನೂ ಓದಿ:  ಚಿಕ್ಕಮಗಳೂರು: ಮದುವೆಯಾಗಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಆಗಮಿಸಿದ್ದ ಜೋಡಿಯ ಮೇಲೆ ಸಂಘಪರಿವಾರ ಕಾರ್ಯಕರ್ತರಿಂದ ಹಲ್ಲೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News