×
Ad

ಮಣಿಪಾಲ: ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಗೆ ಬಿದ್ದು ಮೃತ್ಯು

Update: 2022-09-15 14:24 IST

ಮಣಿಪಾಲ, ಸೆ.15: ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ಮಣಿಪಾಲದ ಮಣ್ಣಪಳ್ಳ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ.  

ಮೃತರನ್ನು ಕುಂದಾಪುರದ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಇವರು  ಮಣ್ಣಪಳ್ಳ ಕೆರೆಯಲ್ಲಿ ಗಾಳಹಾಕಿ ಮೀನು ಹಿಡಿಯುತ್ತಿದ್ದ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. 

ಸ್ಥಳಕ್ಕೆ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್ ಹಾಗೂ ಮಣಿಪಾಲ ಠಾಣಾಧಿಕಾರಿ ರಾಜಶೇಖರ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

ಮೃತದೇಹವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News