×
Ad

ತನ್ನ 'ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ’ ಎಂದು ಎಎಪಿ ದೂರು

Update: 2022-09-15 14:49 IST
Photo: Twitter/@AamAadmiParty

ಹೊಸದಿಲ್ಲಿ: ಭಾರತೀಯ ಜನತಾ ಪಕ್ಷವು ತನ್ನ ಶಾಸಕರನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಆಮ್ ಆದ್ಮಿ ಪಕ್ಷವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ ನಂತರ ಪಂಜಾಬ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ.

Hindustan Times ಪ್ರಕಾರ, ರಾಜ್ಯ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಮತ್ತು 11 ಪಕ್ಷದ ಶಾಸಕರು ಬುಧವಾರ ಚಂಡೀಗಢದಲ್ಲಿ ಡಿಜಿಪಿ ಗೌರವ್ ಯಾದವ್ ಅವರನ್ನು ಭೇಟಿ ಮಾಡಿದರು.  ಕನಿಷ್ಠ 10 ಪಕ್ಷದ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಂಜಾಬ್ ಸರಕಾರವನ್ನು ಉರುಳಿಸಲು ತಲಾ 25 ಕೋಟಿ ರೂ. ಆಫರ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

 “ರಾಜ್ಯದ ಕೆಲವು ಶಾಸಕರು ಸಲ್ಲಿಸಿದ ದೂರಿನ ನಂತರ ಪಂಜಾಬ್ ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 8 ಹಾಗೂ  ಭಾರತದ ದಂಡ ಸಂಹಿತೆ (IPC) ಸೆಕ್ಷನ್ 171-ಬಿ ಮತ್ತು 120-ಬಿ ಅಡಿಯಲ್ಲಿ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ’’ ಎಂದು ರಾಜ್ಯ ಪೊಲೀಸ್‌ನ ಅಧಿಕೃತ ವಕ್ತಾರರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News