×
Ad

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗೆ ಈಡಿ ಸಮನ್ಸ್

Update: 2022-09-15 16:39 IST

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ(ಈಡಿ) ಸಮನ್ಸ್ ಜಾರಿ ಮಾಡಿದೆ.

ಸೆ.19ರಂದು ವಿಚಾರಣೆಗೆ ಹಾಜರಾಗುವಂತೆ ಈಡಿ ಸೂಚಿಸಿದೆ ಎಂದು ತಿಳಿದು ಬಂದಿದೆ. 

ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ. ಶಿವಕುಮಾರ್ ಅವರು, 'ಭಾರತ್ ಜೋಡೋ ಯಾತ್ರೆ (BharatJodoYatra) ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ. ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್‌ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ' ಎಂದು ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್  ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ  ಕೋರ್ಟ್‌ನಲ್ಲಿ ಮೇ 28ರಂದು ವಿಚಾರಣೆ ನಡೆದಿತ್ತು. ನ್ಯಾಯಮೂರ್ತಿ ವಿಕಾಸ್‌ ದುಲ್‌ ಅವರ ಪೀಠದಲ್ಲಿ ವಿಚಾರಣೆ ನಡೆದಿದ್ದು. ವಾದವನ್ನು ಆಲಿಸಿದ ಇಡಿ ವಿಶೇಷ ನ್ಯಾಯಾಲಾಯ ವಿಚಾರಣೆಯನ್ನು ಮೇ 31ಕ್ಕೆ ವಿಚಾರಣೆ ಮುಂದೂಡಿದ್ದರು.

ಇಂದು ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News