ಸೆ.18ಕ್ಕೆ ಮೈಸೂರು ವಿಭಾಗ ದಸರಾ ಕ್ರೀಡಾಕೂಟ ಉದ್ಘಾಟನೆ
ಉಡುಪಿ, ಸೆ.15: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಸೆ.18ರ ಬುಧವಾರ ಬೆಳಗ್ಗೆ 9:30ಕ್ಕೆ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್‌ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲೆಯ ಶಾಸಕರು ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಕೆ. ಉದಯ್‌ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್.ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಡಾ.ಹೆಚ್.ಎನ್ ಗೋಪಾಲಕೃಷ್ಣ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.