ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

Update: 2022-09-15 15:23 GMT

ಬೆಂಗಳೂರು, ಸೆ. 15: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ದುರ್ಘಟನೆಯಲ್ಲಿ ಸಾವನ್ನಪ್ಪಿದ ಮೂವರು ರೋಗಿಗಳ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿಸ ಅವರು,  ರೋಗಿಗಳ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. 

ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ(ವಿಮ್ಸ್)ಯಲ್ಲಿ ಸಂಭವಿಸಿದೆ.  ವಿದ್ಯುತ್ ಸಂಪರ್ಕ ಕಡಿತಗೊಂಡ ಪರಿಣಾಮ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ಮೂವರು ರೋಗಿಗಳು ಬುಧವಾರ ಮೃತಪಟ್ಟಿರುವ ಘಟನೆ ನಡೆದಿದೆ.  ಆಸ್ಪತ್ರೆಯಲ್ಲಿ ಜನರೇಟರ್ ಇದ್ದರೂ ಕೆಲಸ ಮಾಡದ ಪರಿಣಾಮ ಐಸಿಯುನಲ್ಲಿದ್ದ ವೆಂಟಿಲೇಟರ್‌ಗಳು ಸ್ಥಗಿತಗೊಂಡು ರೋಗಿಗಳು ಮೃತಪಟ್ಟಿದ್ದಾರೆ ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News