ಮಣ್ಣಪಳ್ಳ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Update: 2022-09-15 22:33 IST
ಮಣಿಪಾಲ, ಸೆ.15: ಇಲ್ಲಿನ ಮಣ್ಣಪಳ್ಳದ ಕೆರೆಯಲ್ಲಿ ಮೀನು ಹಿಡಿಯುತ್ತಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಬಗ್ಗೆ ವರದಿ ಯಾಗಿದೆ.
ಮೃತರನ್ನು ಕುಂದಾಪುರದ ಪ್ರಕಾಶ್ ಎಂದು ಗುರುತಿಸಲಾಗಿದೆ. ಸೆ.14ರಂದು ಸಂಜೆ ವೇಳೆ ಮಣ್ಣಪಳ್ಳ ಕೆರೆಯಲ್ಲಿ ಮೀನು ಹಿಡಿಯಲು ಕೆರೆಯ ನೀರಿಗೆ ಇಳಿದಿದ್ದ ಪ್ರಕಾಶ್, ನೀರಿನಲ್ಲಿ ಮುಳುಗಿ ಮೃತಪಟ್ಟರೆಂದು ತಿಳಿದು ಬಂದಿದೆ. ಇವರ ಮೃತದೇಹವು ಸೆ.15ರಂದು ಬೆಳಗ್ಗೆ ಪತ್ತೆಯಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.