ಗೌತಮ್ ಅದಾನಿ ಈಗ ವಿಶ್ವದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿ

Update: 2022-09-16 09:39 GMT
ಗೌತಮ್ ಅದಾನಿ (PTI)

ಹೊಸದಿಲ್ಲಿ: ಅಮೆಝಾನ್ ಮುಖ್ಯಸ್ಥ ಜೆಫ್ ಬೆಝೋಸ್ ಹಾಗೂ  ಲೂಯಿಸ್ ವಿಟ್ಟನ್ ನ  ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿದ ಭಾರತದ ಉದ್ಯಮಿ  ಗೌತಮ್ ಅದಾನಿ ಈಗ ವಿಶ್ವದ ಎರಡನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ (Gautam Adani Is Now World's Second-Richest Person)ಎಂದು ಫೋರ್ಬ್ಸ್(Forbes) ತಿಳಿಸಿದೆ.

 ಅದಾನಿ ಪ್ರಸಕ್ತ  154.7 ಬಿಲಿಯನ್ ಡಾಲರ್ ಮೌಲ್ಯದ ಸಂಪತ್ತು ಹೊಂದಿದ್ದಾರೆ.

ಎಲೋನ್ ಮಸ್ಕ್ ಅವರು 273.5 ಬಿಲಿಯನ್ ಡಾಲರ್   ನಿವ್ವಳ ಮೌಲ್ಯದ ಸಂಪತ್ತಿನೊಂದಿಗೆ ಅತ್ಯಂತ  ಶ್ರೀಮಂತ ವ್ಯಕ್ತಿಯಾಗಿ ಉಳಿದಿದ್ದಾರೆ.

ಕಳೆದ ತಿಂಗಳೂ ಕೂಡ  ಅದಾನಿ ಅವರು ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನವನ್ನು ಗಳಿಸಿದ್ದರು.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಮುಖ್ಯಸ್ಥರಾಗಿರುವ ಮುಖೇಶ್ ಅಂಬಾನಿ 92 ಬಿಲಿಯನ್ ಡಾಲರ್ ಮೌಲ್ಯದ ಸಂಪತ್ತಿನೊಂದಿಗೆ  ಎಂಟನೇ ಸ್ಥಾನದಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News