ಬಿಜೆಪಿ ಸೇರಲಿರುವ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್

Update: 2022-09-16 09:03 GMT
Photo:twitter

ಚಂಡಿಗಢ: ಮಾಜಿ ಮುಖ್ಯಮಂತ್ರಿ ಹಾಗೂ  ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ (Amarinder Singh, Punjab Ex-Chief Minister)ಮುಂದಿನ ವಾರ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಪಕ್ಷದ ವಕ್ತಾರರು ಇಂದು ತಿಳಿಸಿದ್ದಾರೆ.

ಅಮರಿಂದರ್ ಸಿಂಗ್ ಅವರು ಹೊಸದಾಗಿ ಸ್ಥಾಪಿಸಿದ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ.

80ರ ಹರೆಯದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ  ನಂತರ ಕಾಂಗ್ರೆಸ್ ತೊರೆದರು. ನಂತರ ಕಳೆದ ವರ್ಷ ಪಂಜಾಬ್ ಲೋಕ ಕಾಂಗ್ರೆಸ್ (PLC) ಅನ್ನು ಸ್ಥಾಪಿಸಿದ್ದರು.

ದಿಲ್ಲಿಯಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಸಿಂಗ್  ಅವರು ಬಿಜೆಪಿ ಸೇರಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News