ಶಿಕ್ಷಣ ಸಂಸ್ಥೆಗಳಿಗೆ ಕೆಟ್ಟ ಹೆಸರು ತರುವ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಬಾರದು: ಅಲಹಾಬಾದ್‌ ಹೈಕೋರ್ಟ್‌

Update: 2022-09-16 12:32 GMT
ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: "ವಿದ್ಯಾರ್ಥಿಗಳು ವಿಶ್ವವಿದ್ಯಾಲಯಗಳು ಅಥವಾ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಪಡೆಯುವುದು ಶಿಕ್ಷಣದ ಉದ್ದೇಶಕ್ಕಾಗಿಯೇ ಹೊರತು ತಮ್ಮ ಮಹಾನ್‌ ಶಿಕ್ಷಣ ಸಂಸ್ಥೆಗಳಿಗೆ ಕೆಟ್ಟ ಹೆಸರು ತರುವ ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅಲ್ಲ," ಎಂದು ಡಿಸೆಂಬರ್‌ 2019 ರಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳ ವೇಳೆ ಕೆಲ ಘಟನೆಗಳಿಗೆ ಸಾಕ್ಷಿಯಾಗಿದ್ದ ಆಲಿಘರ್‌ ಮುಸ್ಲಿಂ ವಿವಿಯಲ್ಲಿ ಪೊಲೀಸರು ಕೈಗೊಂಡ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಕೆಲ ಅರ್ಜಿಗಳನ್ನು ವಜಾಗೊಳಿಸುವ ವೇಳೆ ಅಲಹಾಬಾದ್‌ ಹೈಕೋರ್ಟ್‌(Allahabad HC) ಹೇಳಿದೆ.

ಈ ಘಟನೆಗಳ ಕುರಿತಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತನಿಖಾ ವರದಿ, ಅದರಲ್ಲಿ ಮಾಡಲಾದ ಶಿಫಾರಸುಗಳು ಹಾಗೂ ಅವುಗಳಿಗೆ ರಾಜ್ಯ ಸರಕಾರ ನೀಡಿದ ಪ್ರತಿಕ್ರಿಯೆಗಳನ್ನು ಪರಿಗಣಿಸಿ ಮುಖ್ಯ ನ್ಯಾಯಮೂರ್ತಿ ರಾಜೇಶ್‌ ಬಿಂದಾಲ್‌ ಮತ್ತು ನ್ಯಾಯಮೂರ್ತಿ ಜೆ ಜೆ ಮುನೀರ್‌ ಅವರ ಪೀಠ ಮೇಲಿನಂತೆ ಹೇಳಿದೆ.

ಆಯೋಗ ಮಾಡಿದ ಎಲ್ಲಾ ಶಿಫಾರಸುಗಳನ್ನು ತಾನು ಜಾರಿಗೊಳಿಸಿರುವುದಾಗಿ ರಾಜ್ಯ ಸರಕಾರ ನ್ಯಾಯಾಲಯಕ್ಕೆ ತಿಳಿಸಿತ್ತಲ್ಲದೆ, ಎರಡು ಶಿಫಾರಸುಗಳು ಕೇಂದ್ರ ಸರಕಾರ ಮತ್ತು ವಿವಿಗೆ ಸಂಬಂಧಿಸಿದ್ದಾಗಿದೆ ಎಂದು ಹೇಳಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News