ಮೂಡುಬಿದಿರೆ: ಆಳ್ವಾಸ್ ನುಡಿಸಿರಿ ಸಮ್ಮೇಳನದ ದಿನಾಂಕ ಬದಲಾವಣೆ

Update: 2022-09-16 13:03 GMT

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಯು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ‘ಆಳ್ವಾಸ್ ನುಡಿಸಿರಿ’ ದಿನಾಂಕ ಬದಲಾವಣೆಯಾಗಿದೆ.

"ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂ‌ಸ್ಕೃತಿಕ ಜಾಂಬೂರಿಯನ್ನು ಆಯೋಜಿಸುವ ಸುವರ್ಣಾವಕಾಶ ನಮ್ಮ ಪಾಲಿಗೆ ಒದಗಿ ಬಂದಿದೆ. ಈ ಎರಡೂ ಕಾರ್ಯಕ್ರಮಗಳು ಪರಸ್ಪರ ಪೂರಕವಾಗಿ ಏಕ ಕಾಲದಲ್ಲಿ ನಡೆದರೆ ಅದರಿಂದ ಹೆಚ್ಚಿನ ಪ್ರಯೋಜನ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕಾರಿ ಸಮಿತಿಯ ತೀರ್ಮಾನದಂತೆ ಆಳ್ವಾಸ್ ನುಡಿಸಿರಿ ಸಮ್ಮೇಳನವನ್ನು 2022 ಡಿಸೆಂಬರ್ 16, 17 ಮತ್ತು 18ರ ಬದಲು 2022 ಡಿಸೆಂಬರ್ 21, 22 ಮತ್ತು 23ನೇ ದಿನಾಂಕಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಬದಲಾದ ದಿನಾಂಕವನ್ನು ಗಮನಿಸಿ ಸಹಕರಿಸುವಂತೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಮೋಹನ ಆಳ್ವ ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News