×
Ad

ಗುಜರಾತ್ ಶಾಸಕ ಜಿಗ್ನೇಶ್‌ ಮೇವಾನಿಗೆ 6 ತಿಂಗಳು ಜೈಲು ಶಿಕ್ಷೆ

Update: 2022-09-16 18:39 IST
ಶಾಸಕ ಜಿಗ್ನೇಶ್‌ ಮೇವಾನಿ (File Photo)

ಅಹಮದಾಬಾದ್: 2016 ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಲ್ಲಿ(Gujarat University) ನಡೆದ ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ನ್ಯಾಯಾಲಯವು ಶುಕ್ರವಾರ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ(Jignesh Mevani) ಮತ್ತು ಇತರ 18 ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ದಲಿತ ಹಕ್ಕುಗಳ ಸಂಘಟನೆಯಾದ ರಾಷ್ಟ್ರೀಯ ದಲಿತ ಅಧಿಕಾರ ಮಂಚ್‌ನ ಮೇವಾನಿ ಮತ್ತು ಅವರ ಸಹಚರರು ವಿಶ್ವವಿದ್ಯಾನಿಲಯದ ಕಾನೂನು ವಿಭಾಗದ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬಿಆರ್ ಅಂಬೇಡ್ಕರ್ ಅವರ ಹೆಸರನ್ನು ಇಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು ಎಂದು The Indian Express ವರದಿ ಮಾಡಿದೆ.

ಸಾರ್ವಜನಿಕ ಆಸ್ತಿ ಹಾನಿ ಮತ್ತು ಗಲಭೆ ಮತ್ತಿತರ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News