ಸೆ.18ರಂದು ಓಣಂ ಹಬ್ಬದ ಆಚರಣೆ
ಉಡುಪಿ, ಸೆ.16: ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ ಉಡುಪಿ ವತಿಯಿಂದ 19ನೇ ವಾರ್ಷಿಕೋತ್ಸವ ಮತ್ತು ಓಣಂ ಹಬ್ಬದ ಆಚರಣೆ ಯನ್ನು ಸೆ.18ರಂದು ಬನ್ನಂಜೆ ಶ್ರೀನಾರಾಯಣಗುರು ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಓಣಂ ಹಬ್ಬ ಆಚರಣೆ ಕಮಿಟಿಯ ಅಧ್ಯಕ್ಷ ಟಿ.ಎ. ರವಿರಾಜನ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಯುಕ್ತ ಪೂಕಳಂ ಸ್ಪರ್ಧೆ ಹಾಗೂ ಸೆಂಟರ್ ಸದಸ್ಯರ ಮಕ್ಕಳಿಗೆ ವಿವಿಧ ಮನೋರಂಜನಾ ಚಟುವಟಿಕೆಗಳು ನಡೆಯಲಿವೆ. ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸದಸ್ಯರ ಮಕ್ಕಳನ್ನು ಗೌರವಿಸಲಾಗುವುದು. ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು ಎಂದರು.
ಬೆಳಗ್ಗೆ 11ಗಂಟೆಗೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಉದ್ಘಾಟಿಸಲಿರುವರು. ಮುಖ್ಯ ಅತಿಥಿಗಳಾಗಿ ಶಾಸಕ ಕೆ.ರಘುಪತಿ ಭಟ್, ನಿಟ್ಟೆ ಕೆಎಸ್ ಹೆಗ್ಡೆ ಇನ್ಸಿಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ನಿರ್ದೇಶಕ ಡಾ.ಶಂಕರ್, ಕೇರಳ ಸಮಾಜಂ ಮಂಗಳೂರು ಅಧ್ಯಕ್ಷ ಟಿ.ಕೆ. ರಾಜನ್ ಭಾಗವಹಿಸಲಿರುವರು ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸೆಂಟರ್ ಅಧ್ಯಕ್ಷ ಸುಗುಣ ಕುಮಾರ್, ಕಾರ್ಯದರ್ಶಿ ಬಿನೇಶ್ ವಿ.ಸಿ., ಉಪಾಧ್ಯಕ್ಷ ಗಣೇಶ್ ವಿ., ಥಾಮಸ್ ಎಂ.ಜೆ. ಉಪಸ್ಥಿತರಿದ್ದರು.