ಸ್ಥಳೀಯರಿಗೆ ಉದ್ಯೋಗ ನೀಡಲು ಕ್ರಮ: ಸಚಿವ ಮುರುಗೇಶ್ ನಿರಾಣಿ

Update: 2022-09-16 17:04 GMT

ಬೆಂಗಳೂರು, ಸೆ. 16: ಉಡುಪಿ ಜಿಲ್ಲೆ ಕಾಪು ಕ್ಷೇತ್ರದ ಪಾದೂರು ಕಚ್ಚಾ ತೈಲ ಸಂಗ್ರಹಣಾ ಘಟಕದ ಎರಡನೆ ಹಂತದ ಕಾಮಗಾರಿಗೆ ಪಾದೂರು ಮತ್ತು ಕಲತ್ತೂರು ಗ್ರಾಮಗಳಲ್ಲಿ 157 ರೈತರ 1990.81 ಎಕರೆ ಖಾಸಗಿ ಹಾಗೂ 10.62 ಎಕರೆ ಸರಕಾರಿ ಸೇರಿ ಒಟ್ಟು 210.43 ಎಕರೆ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗಿದೆ' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್.ನಿರಾಣಿ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಲಾಲಾಜಿ ಆರ್ ಮೆಂಡನ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ಐಎಸ್‍ಪಿಆರ್‍ಎಲ್ ಎರಡನೆ ಹಂತದ ಯೋಜನೆಗಾಗಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾದೂರ ಮತ್ತು ಕಳತ್ತೂರು ಗ್ರಾಮದಲ್ಲಿ ಭೂ ಸ್ವಾಧೀನಕ್ಕೆ 2021ರ ಜನವರಿ 12ಕ್ಕೆ ಅಧಿಸೂಚನೆ ಹೊರಡಿಸಿದ್ದು, ಸದರಿ ಜಮೀನಿನ ಭೂಮಿ ಮಾಲಕರಿಗೆ ನೋಟಿಸ್ ನೀಡಲಾಗಿದೆ' ಎಂದು ಮಾಹಿತಿ ನೀಡಿದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಸದಸ್ಯ ಲಾಲಾಜಿ ಮೆಂಡನ್, ‘ರೈತರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ಹಾಗೂ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಆದ್ಯತೆ ನೀಡಬೇಕು' ಎಂದು ಆಗ್ರಹಿಸಿದರು. ‘ಭೂ ಸ್ವಾಧೀನಕ್ಕೆ ರೈತರಿಗೆ ಅಗತ್ಯ ಪರಿಹಾರ ನೀಡಲಾಗುವುದು. ಅಲ್ಲದೆ, ಸ್ಥಳೀಯರಿಗೆ ಉದ್ಯೋಗ ನೀಡಲು ಕ್ರಮ ವಹಿಸಲಾಗುವುದು' ಎಂದು ಸಚಿವ ನಿರಾಣಿ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News