ಬಿಎಸ್ ವೈ, ವಿಜಯೇಂದ್ರ ವಿರುದ್ಧ FIR​ ದಾಖಲು

Update: 2022-09-17 05:17 GMT

ಬೆಂಗಳೂರು, ಸೆ.17: ಲಂಚ ಸ್ವೀಕಾರ ಆರೋಪ‌ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವೈ.ವಿಜಯೇಂದ್ರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದ ಮೇರೆಗೆ ಲೋಕಾಯುಕ್ತ FIR ದಾಖಲಿಸಿ ತನಿಖೆ ನಡೆಸಲು ಮುಂದಾಗಿದೆ.

ಬಿ.ಎಸ್​. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗಳನ್ನು ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಂತರ ರೂಪಾಯಿ ನಗದು ಪಡೆದಿದ್ದಾರೆ ಎನ್ನುವ ಆರೋಪವಿದೆ.

ಜೊತೆಗೆ ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ಖಾಸಗಿ ದೂರು ದಾಖಲಿಸಿದ್ದರು. ಆದರೆ ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಗಳ ವಿಶೇಷ ನ್ಯಾಯಾಲಯ ದೂರನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ಬಿಎಸ್‌ ವೈ, ಕುಟುಂಬದ ಸದಸ್ಯರು, ಸಚಿವ ಸೋಮಶೇಖರ್‌ ವಿರುದ್ಧ FIR ದಾಖಲಿಸಿ, ತನಿಖೆ ನಡೆಸಲು ಕೋರ್ಟ್ ಸೂಚನೆ

ಆನಂತರ ಟಿ.ಜೆ.ಅಬ್ರಾಹಂ ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಎಫ್​​ಐಆರ್ ದಾಖಲಿಸಲು ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಲೋಕಾಯುಕ್ತಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚಿಸಿದ ಬೆನ್ನಲ್ಲೇ  ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಸಚಿವ ಎಸ್.ಟಿ.ಸೋಮಶೇಖರ್, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಶಶಿಧರ ಮರಡಿ,  ಡಾ.ಜಿ.ಸಿ.ಪ್ರಕಾಶ್, ವಿರುಪಾಕ್ಷಪ್ಪ, ಕೆ.ರವಿ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News