×
Ad

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಭಾರತ ಐಕ್ಯತಾ ಯಾತ್ರೆಯ ಕೆಪಿಸಿಸಿ ಸಂಯೋಜಕರಾಗಿ ಎಂ.ಎಸ್ ಮಹಮ್ಮದ್ ನೇಮಕ

Update: 2022-09-17 12:08 IST

ವಿಟ್ಲ : ರಾಹುಲ್ ಗಾಂಧಿ ನೇತ್ರತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯ ಕೆಪಿಸಿಸಿ ಸಂಯೋಜಕರನ್ನಾಗಿ ದ.ಕ.ಜಿಲ್ಲೆಯಿಂದ ಎಂ.ಎಸ್ ಮಹಮ್ಮದ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾದ  ಡಿ.ಕೆ. ಶಿವಕುಮಾರ್ ಅವರು ನೇಮಕ ಮಾಡಿದ್ದಾರೆ.

ಎಂ.ಎಸ್ ಮಹಮ್ಮದ್ ಅವರು ದ.ಕ.ಜಿಲ್ಲಾ ಯುವಕ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ , ವಿಟ್ಲ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾಗಿ , ಕೆಪಿಸಿಸಿ ಕಾರ್ಯದರ್ಶಿಯಾಗಿ, ದ.ಕ.ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ , ದ.ಕ.ಜಿಲ್ಲಾ ಪಂಚಾಯತ್ ನಲ್ಲಿ ಸತತವಾಗಿ ಮೂರು ಭಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News