ಕೋಡಿ: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ 'ಸ್ವಚ್ಛ್ ಸಾಗರ್ - ಸುರಕ್ಷಿತ್ ಸಾಗರ್' ಅಭಿಯಾನ

Update: 2022-09-17 13:31 GMT

ಕುಂದಾಪುರ, ಸೆ. 17: ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಹಸಿರು ಕಟ್ಟಡಗಳ ನಿರ್ಮಾಣದಲ್ಲಿ ಹೆಸರು ಪಡೆದಿರುವ ಬ್ಯಾರೀಸ್ ಗ್ರೂಪ್ ಮತ್ತು ಐ.ಜಿ.ಬಿ.ಸಿ (Indian Green Building Council) ಬೆಂಗಳೂರು ಘಟಕದ ಚೆಯರ್‌ಮ್ಯಾನ್ ಸಯ್ಯದ್ ಮಹಮ್ಮದ್ ಬ್ಯಾರಿ ಅವರ ಆಶಯದಂತೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನ ಅಂಗವಾಗಿ 'ಸ್ವಚ್ಛ್ ಸಾಗರ್ - ಸುರಕ್ಷಿತ್ ಸಾಗರ್' ಮತ್ತು ವಿಶ್ವ ಹಸಿರು ಕಟ್ಟಡಗಳ ಸಪ್ತಾಹದ ಪ್ರಯುಕ್ತ ನಡೆಸಿಕೊಂಡು ಬರುತ್ತಿರುವ "ಸ್ವಚ್ಛ ಕಡಲತೀರ - ಹಸಿರು ಕೋಡಿ" ಅಭಿಯಾನ ಇಂದು ಯಶಸ್ವಿಯಾಗಿ ನಡೆಸಲಾಯಿತು.

ಸಂಸ್ಥೆಯ ವಿದ್ಯಾರ್ಥಿಗಳು ಕಾಲ್ನಡಿಗೆಯ ಮೂಲಕ ಪರಿಸರ ಸ್ವಚ್ಛತೆ ಹಾಗೂ ಜವಾಬ್ದಾರಿಯ ಕುರಿತಾದ ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ ಘೋಷಣೆಯೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಈ ಕಾರ್ಯಕ್ರಮಕ್ಕೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಚಾಲನೆ ನೀಡಿದರು.

ಕುಂದಾಪುರ ಪುರಸಭೆಯ ಅಧ್ಯಕ್ಷ, ಮುಖ್ಯಾಧಿಕಾರಿ, ಸದಸ್ಯರು ಹಾಗೂ ಕೋಟೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸದಸ್ಯರು, ಸಿಬ್ಬಂದಿ ಮತ್ತು ಪ್ರತಿ ತಿಂಗಳ ಈ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿರುವ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ಸಾರ್ವಜನಿಕರು, ಹಳೆ ವಿದ್ಯಾರ್ಥಿಗಳು, ಊರಿನ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳಿಗೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸೈಯದ್ ಮಹಮದ್ ಬ್ಯಾರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News