ಕುತೂಹಲಕ್ಕೆ ಕಾರಣವಾದ ಎಚ್.ಡಿ.ದೇವೇಗೌಡ-ಸಚಿವ ಆರ್.ಅಶೋಕ್ ಭೇಟಿ

Update: 2022-09-17 15:20 GMT

ಬೆಂಗಳೂರು, ಸೆ. 17: ಕಂದಾಯ ಸಚಿವ ಆರ್.ಅಶೋಕ್ (R. Ashoka) ಅವರು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (H. D. Deve Gowda)  ಅವರನ್ನು ಶನಿವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.

ದೇವೇಗೌಡ ಅವರು ವಯೋಸಹಜ ಅನಾರೋಗ್ಯದ ಕಾರಣ ಪದ್ಮನಾಭ ನಗರದಲ್ಲಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಹಿನ್ನೆಲೆಯಲ್ಲಿ ಆರ್.ಅಶೋಕ್, ಗೌಡರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಪ್ರಧಾನಿ ಮೋದಿಯವರು ದೂರವಾಣಿ ಮೂಲಕ ದೇವಗೌಡರ ಆರೋಗ್ಯ ವಿಚಾರಿಸಿದ್ದರು. ಈ ಮಧ್ಯೆ ಸಿಎಂ ಬಸವರಾಜ ಬೊಮ್ಮಾಯಿ ಅವರೂ ದೇವೇಗೌಡರ ಆರೋಗ್ಯ ವಿಚಾರಿಸಿದ್ದಾರೆ. ದೇವೇಗೌಡ ಹಾಗೂ ಆರ್.ಅಶೋಕ್ ಇದೇ ಸಂದರ್ಭದಲ್ಲಿ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸಮಾಲೋಚನೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ, ರಾಜ್ಯ ಸರಕಾರದಲ್ಲಿನ ಪ್ರಮುಖ ಸಚಿವರೊಬ್ಬರ ಭೂ ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲೆ ಬಿಡುಗಡೆ ಮಾಡುವ ಎಚ್ಚರಿಕೆ ನೀಡಿದ್ದರು. ಹೀಗಾಗಿ ದೇವೇಗೌಡ ಹಾಗೂ ಸಚಿವ ಆರ್.ಅಶೋಕ್ ಭೇಟಿ ಮಹತ್ವದ ಪಡೆದುಕೊಂಡಿದ್ದು, ಕುತೂಹಲ ಸೃಷ್ಟಿಸಿದೆ.

ಇದನ್ನೂ ಓದಿ: ಇವತ್ತೇ ಮಂತ್ರಿ ಆಗು ಎಂದರೆ ನಾನು ಸಿದ್ಧನಾಗಿದ್ದೇನೆ: ಕೆ.ಎಸ್. ಈಶ್ವರಪ್ಪ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News