ಪೊಕ್ಸೊ ಪ್ರಕರಣ | ಮುರುಘಾಶ್ರೀ ಪೀಠತ್ಯಾಗಕ್ಕೆ ನಿರ್ದೇಶಿಸುವಂತೆ ಸಿಜೆಗೆ ಪತ್ರ ಬರೆದ ಶಾಸಕ ಯತ್ನಾಳ್

Update: 2022-09-17 15:17 GMT

ಬೆಂಗಳೂರು, ಸೆ.17: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗದ ಮುರುಘಾ ಶ್ರೀ ಅವರನ್ನು ಪೀಠತ್ಯಾಗ ಮಾಡಲು ನಿರ್ದೇಶಿಸಬೇಕೆಂದು ಕೋರಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅವರಿಗೆ ಶನಿವಾರ ಪತ್ರ ಬರೆದಿದ್ದಾರೆ. 

ಮುರುಘಾಶ್ರೀ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ, ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದ್ದು, ಪ್ರಕರಣದ ಬಗ್ಗೆ ಹಾಗೂ ಮಠದ ಆಸ್ತಿ ಬಗ್ಗೆಯೂ ನ್ಯಾಯಾಲಯ ಕೂಲಂಕುಷ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. 

ಮುರುಘಾಶ್ರೀಗಳಿಗೆ ಪೀಠತ್ಯಾಗಕ್ಕೆ ಸೂಚಿಸಬೇಕು. ಇಲ್ಲವಾದಲ್ಲಿ ಅವರನ್ನು ಪದಚ್ಯುತಗೊಳಿಸಬೇಕೆಂದು ಹೈಕೋರ್ಟ್ ಸಿಜೆಗೆ ಶಾಸಕ ಯತ್ನಾಳ್ ಅವರು ಮನವಿ ಮಾಡಿದ್ದಾರೆ. 

ಮುರುಘರಾಜೇಂದ್ರ(ಎಸ್‍ಜೆಎಂ) ಮಠ ಐತಿಹಾಸಿಕ ವಿರಕ್ತ ಪರಂಪರೆಯ ಶೂನ್ಯ ಪೀಠದ ಅಗ್ರಗಣ್ಯ ಮಠವಾಗಿದ್ದು, ಇದರ ಪೀಠಾಧ್ಯಕ್ಷರಾದ ಶಿವಮೂರ್ತಿ ಮುರುಘಾ ಶ್ರೀಗಳು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಿಂದ ಜೈಲು ಪಾಲಾಗಿರುವುದು ವೀರಶೈವ-ಲಿಂಗಾಯತ ಸಮುದಾಯಕ್ಕೆ ಅವಮಾನಕರ ಸಂಗತಿಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕುತೂಹಲಕ್ಕೆ ಕಾರಣವಾದ ಎಚ್.ಡಿ.ದೇವೇಗೌಡ-ಸಚಿವ ಆರ್.ಅಶೋಕ್ ಭೇಟಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News