×
Ad

ಪಣಂಬೂರು: ಸ್ವಚ್ಛ, ಸುರಕ್ಷಿತ ಕಡಲ ತೀರ ಅಭಿಯಾನಕ್ಕೆ ಚಾಲನೆ

Update: 2022-09-17 21:31 IST

ಮಂಗಳೂರು, ಸೆ.17:ದ.ಕ.ಜಿಲ್ಲಾಡಳಿತ, ಕೇಂದ್ರ ಸರಕಾರದ ಭೂವಿಜ್ಞಾನ ಮಂತ್ರಾಲಯ, ಕರಾವಳಿ ಕಾವಲು ಪಡೆ, ನೆಹರೂ ಯುವ ಕೇಂದ್ರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ವಿಪತ್ತು ನಿರ್ವಹಣಾ ಪ್ರಾಧಿಕಾರ, ಕೇಂದ್ರ ಪರಿಸರ, ಅರಣ್ಯ ಇಲಾಖೆ ಹಾಗೂ ಎನ್ನೆಸ್ಸೆಸ್ ಸಹಯೋಗದಲ್ಲಿ ಸ್ಪಚ್ಛ ಹಾಗೂ ಸುರಕ್ಷಿತ ಕಡಲ ತೀರ ಅಭಿಯಾನವು ಪಣಂಬೂರಿನ ಕಡಲ ತೀರದಲ್ಲಿ ಶನಿವಾರ ಆರಂಭಗೊಂಡಿತು,

ಸಂಸದ  ನಳಿನ್ ಕುಮಾರ್ ಕಟೀಲ್ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶದಲ್ಲಿ ಸ್ಪಚ್ಛತಾ ಆಂದೋಲನಾ ಜಾಗೃತಿಗೊಂಡಿದೆ. ಕಡಲ ತೀರದ ಸ್ಪಚ್ಛತಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಮಹತ್ವ ನೀಡಿದ್ದಾರೆ. ಹಾಗಾಗಿ ರಾಷ್ಟದ ಆರೋಗ್ಯವನ್ನು ರಕ್ಷಣೆ ಮಾಡುವ ಇಂತಹ ಕೆಲಸ ಕಾರ್ಯಗಳು ಮುಂದುವರಿಯಲಿ ಎಂದರು.

ಶಾಸಕ ಡಾ.ವೈ.ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಕರಾವಳಿ ಕಾವಲು ಪಡೆಯ ಡಿಐಜಿ ವೆಂಕಟೇಶ್ ಬಾಬು, ವಿಜ್ಞಾನಿ ಡಾ. ಸ್ಮಿತಾ, ಪ್ರವಾಸೋಸ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ, ಪರಿಸರ ಇಲಾಖೆಯ ಅಧಿಕಾರಿ ಮಹೇಶ್ ಕುಮಾರ್, ಕಾರ್ಯಕ್ರಮದ ನೋಡಲ್ ಅಧಿಕಾರಿ ರಘುವೀರ್ ಸೂಟರ್ ಪೇಟೆ, ಜಿಲ್ಲಾ ವಿಪತ್ತು ನಿರ್ವಹಣ ಪರಿಣತ ವಿಜಯ್ ಕುಮಾರ್ ಪೂಜಾರ್ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News